ಶನಿವಾರ, ನವೆಂಬರ್ 16, 2019
21 °C

ಕೂಡ್ಲಿಗಿ: ಬಿಜೆಪಿ ಶಾಸಕ ನಾಗೇಂದ್ರ ರಾಜೀನಾಮೆ

Published:
Updated:

ಕೂಡ್ಲಿಗಿ : ಶಾಸಕ ಸ್ಥಾನದ ಜೊತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿರುವುದಾಗಿ ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಬಿ. ನಾಗೇಂದ್ರ ಸೋಮವಾರ ತಿಳಿಸಿದರು.ಶಾಸಕ ಸ್ಥಾನ ರಾಜೀನಾಮೆ ಪತ್ರವನ್ನು ವಿಧಾನಸಭೆ ಸ್ಪೀಕರ್ ಕೆ.ಜಿ. ಬೊಪಯ್ಯ ಅವರಿಗೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರಿಗೆ ಫ್ಯಾಕ್ಸ್ ಮೂಲಕ ರವಾನಿಸಿರುವುದಾಗಿ ಅವರು ತಿಳಿಸಿದರು.ಕೂಡ್ಲಿಗಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ  ನಾಗೇಂದ್ರ ಇದೇ ಸಂದರ್ಭದಲ್ಲಿ ತಿಳಿಸಿದರು.

ಪ್ರತಿಕ್ರಿಯಿಸಿ (+)