ಶುಕ್ರವಾರ, ಏಪ್ರಿಲ್ 16, 2021
21 °C

ಕೂಲಿ ಕಾರ್ಮಿಕರ ಅಹೋರಾತ್ರಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ತಾಪುರ: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕಳೆದ ವರ್ಷ ಕೆಲಸ ಮಾಡಿರುವ ಕೂಲಿಕಾರ್ಮಿಕರಿಗೆ ಕೂಲಿ ಹಣ ಪಾವತಿ ಮಾಡಬೇಕು. ಪ್ರಸ್ತುತ ವರ್ಷ ಕೆಲಸ ಕೇಳಿದರೂ ಕೆಲಸ ಕೊಡದ ಗ್ರಾಮ ಪಂಚಾಯಿತಿಗಳಲ್ಲಿ ಕೂಲಿ ಕಾರ್ಮಿಕರಿಗೆ ನಿರುದ್ಯೋಗ ಭತ್ಯೆ ನೀಡಬೇಕು ಎಂದು ಆಗ್ರಹಿಸಿ ಕೂಲಿ ಕಾರ್ಮಿಕರು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ಅಶೋಕ ಮ್ಯಾಗೇರಿ ನೇತೃತ್ವದಲ್ಲಿ ಸೋಮವಾರ ತಹಸೀಲ್ದಾರ್  ಕಾರ್ಯಾಲಯದ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.ತಾಲ್ಲೂಕಿನ ಭಂಕೂರ, ಕಾಳಗಿ, ಚಿಂಚೋಳಿ (ಎಚ್), ಗೋಟೂರ, ಭಾಗೋಡಿ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ನೀಡುವಂತೆ ಕೂಲಿ ಕಾರ್ಮಿಕರು ಕಳೆದ ಫೆಬ್ರುವರಿ, ಮಾರ್ಚ್ ತಿಂಗಳಲ್ಲಿ ಅರ್ಜಿ ಕೊಟ್ಟರೂ ಇಲ್ಲಿವರೆಗೆ ಕೆಲಸ ಕೊಟ್ಟಿಲ್ಲ. 15 ದಿನ ಮೀರಿದರೂ ಕೆಲಸ ಕೊಡದ ಕಾರಣ ಉದ್ಯೋಗ ಖಾತರಿ ನಿಯಮದಂತೆ ನಿರುದ್ಯೋಗ ಭತ್ಯೆ ಕೊಡಬೇಕು ಎಂದು ಅಶೋಕ ಒತ್ತಾಯಿಸಿದ್ದಾರೆ.ಶಹಾಬಾದ-ಸಣ್ಣೂರ ರಾಜ್ಯ ಹೆದ್ದಾರಿಯಲ್ಲಿ ಯಂತ್ರದ ಮೂಲಕ ಕೆಲಸ ಮಾಡಿಸಿ ಕೂಲಿ ಕಾರ್ಮಿಕರ ಹೆಸರಲ್ಲಿ ಎನ್‌ಎಂಆರ್ ಹಾಕಿದ್ದಾರೆ. ಮುಗ್ಧ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ತನಿಖೆ ಮಾಡಿ ಕೂಲಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ. 2009-10ನೇ ಸಾಲಿನಲ್ಲಿ ಕೆಲಸ ಮಾಡಿರುವ ಕೂಲಿ ಕಾರ್ಮಿಕರಿಗೆ ಕೂಲಿ ಹಣ ಪಾವತಿ ಮಾಡಬೇಕು. ದಂಡೋತಿ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡಿ 15 ತಿಂಗಳಾದರೂ ಕೂಲಿ ಹಣ ಪಾವತಿ ಮಾಡಿಲ್ಲ. ಕೂಡಲೇ ಪಾವತಿ ಮಾಡಬೇಕು. ನಿರ್ಲಕ್ಷ್ಯ ತೋರುತ್ತಿರುವ ಕಿರಿಯ ಎಂಜಿನಿಯರ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಶಕುಂತಲಾ ಪಾಟೀಲ್, ಕಾರ್ಯದರ್ಶಿ ದೇವಮ್ಮ ಅನ್ನದಾನಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಬೆಂಬಲಿಸಿದರು. ಹಣಮಯ್ಯಾ ಗುತ್ತೇದಾರ್, ಗಂಗಮ್ಮ ಭರಾಟೆ, ಮಲ್ಲಮ್ಮ ತೊಟ್ನಳ್ಳಿ, ಭೀಮರಾಯ ಕಟ್ಟಮನಿ, ಮಲ್ಲಿಕಾರ್ಜುನ ಡಾಂಗೆ, ಪಾರ್ವತಿ ಗುತ್ತೇದಾರ್, ದ್ರೌಪದಿ ಚಿಮ್ಮನಚೂಡ, ಉಸ್ಮಾನ ಕಂಚಗಾರ, ವಿಜಯಲಕ್ಷ್ಮೀ ತರನಳ್ಳಿ, ಭೀಮರಾಯ ಪೂಜಾರಿ, ಶರಣು ತೊಟ್ನಳ್ಳಿ, ದೇವಿದಾಸ ದಂಡೋತಿ ಇತರರು ಸತ್ಯಾಗ್ರಹದಲ್ಲಿ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.