ಸೋಮವಾರ, ಮಾರ್ಚ್ 8, 2021
24 °C

ಕೃಷಿಗೆ ನೀರಾವರಿಯೇ ಜೀವಾಳ: ಪ್ರಧಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷಿಗೆ ನೀರಾವರಿಯೇ ಜೀವಾಳ: ಪ್ರಧಾನಿ

ಗ್ಯಾಂಗ್‌ಟಕ್: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ಕೆರೆ ಕಟ್ಟೆಗಳ ನಿರ್ಮಾಣ ಮತ್ತು ಜಲಮೂಲಗಳ ಜೀರ್ಣೋದ್ಧಾರದ ಮೂಲಕ ಎಲ್ಲಾ ಕೃಷಿ ಜಮೀನುಗಳಿಗೂ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.ಸೋಮವಾರ ಇಲ್ಲಿ ಮುಕ್ತಾಯವಾದ ಸುಸ್ಥಿರ ಬೇಸಾಯ ಮತ್ತು ರೈತರ ಕಲ್ಯಾಣ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಪ್ರತಿ ರೈತನಿಗೂ ನೀರಾವರಿ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ವಿಚಾರ ಸಂಕಿರಣದಲ್ಲಿ ಸೂಚಿಸಿರುವ ಅಂಶಗಳನ್ನು ಬಜೆಟ್ ರೂಪಿಸುವಲ್ಲಿ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.ಎಪಿಎಂಸಿ ಸುಧಾರಣೆಯಿಂದ ರೈತರಿಗೆ ಹೆಚ್ಚಿನ ಬೆಲೆ: ‘ಕರ್ನಾಟಕದ ಎಪಿಎಂಸಿ ವ್ಯವಸ್ಥೆಯಲ್ಲಿ ಸುಧಾರಣೆ ತಂದ ನಂತರ ರೈತರಿಗೆ ಹೆಚ್ಚಿನ ಲಾಭ ದೊರೆಯುತ್ತಿದೆ.  ಒಂದೆಡೆಯೇ ಎಲ್ಲಾ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಿರುವ ಕಾರಣ ರೈತರಿಗೆ ಹೆಸರುಕಾಳು, ಕಡಲೆಕಾಯಿ ಮತ್ತು ಕೊಬ್ಬರಿ ಮಾರಾಟದಿಂದ ದೊರಕುತ್ತಿರುವ ಆದಾಯದಲ್ಲಿ ಶೇ 40ರಷ್ಟು ಹೆಚ್ಚಳವಾಗಿದೆ’ ಎಂದು ಕರ್ನಾಟಕದ ಕೃಷಿ ಸಚಿವ ಕೃಷ್ಣಬೈರೇಗೌಡ ಹೇಳಿದರು.ಸಿಕ್ಕಿಂ ಸಾವಯವ ರಾಜ್ಯ: ಸಿಕ್ಕಿಂ ದೇಶದ ಮೊದಲ ಸಾವಯವ ರಾಜ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮೇಳನದಲ್ಲಿ ಘೋಷಿಸಿದರು. ಸಾವಯವ ರಾಜ್ಯವಾಗುವ ನಿಟ್ಟಿನಲ್ಲಿ ಸಿಕ್ಕಿಂ ಕೈಗೊಂಡ ಕ್ರಮಗಳನ್ನು ಉಳಿದ ರಾಜ್ಯಗಳೂ ಅನುಸರಿಸಬೇಕು ಎಂದು ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.