ಮಂಗಳವಾರ, ಜೂನ್ 22, 2021
22 °C

ಕೃಷಿಗೆ 500ಕೋಟಿ ಪ್ಯಾಕೇಜ್- ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಿಲ್ಲೆಯಲ್ಲಿ ಕೃಷಿ ಅಭಿವೃದ್ಧಿಗೆ ಕೇಂದ್ರ ಸರ್ಕಾರ 500 ಕೋಟಿ ರೂಪಾಯಿಯ ಪ್ಯಾಕೇಜ್ ಒದಗಿಸುವ ಭರವಸೆ ನೀಡಿದೆ ಎಂದು ಶಾಸಕ ರಹೀಮ್‌ಖಾನ್ ತಿಳಿಸಿದರು.ತಾಲ್ಲೂಕಿನ ಹಿಪ್ಪಳಗಾಂವ್ ಗ್ರಾಮದಲ್ಲಿ ಸೋಮವಾರ ಹೈನುಗಾರಿಕೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರನ್ನು ಈಚೆಗೆ ಭೇಟಿ ಮಾಡಿದ್ದ ಸಂದರ್ಭದಲ್ಲಿ ಈ ಆಶ್ವಾಸನೆ ನೀಡಿದ್ದಾರೆ ಎಂದು ಹೇಳಿದರು.ಹೈನುಗಾರಿಕೆಗೆ ಉತ್ತೇಜನ ನೀಡುವುದಕ್ಕಾಗಿ ನಬಾರ್ಡ್ ಯೋಜನೆ ಅಡಿಯಲ್ಲಿ ಪ್ರತಿ ಗ್ರಾಮದಲ್ಲಿ 20 ರಿಂದ 30 ಜನ ರೈತರಿಗೆ ಆಕಳು ಮತ್ತು ಎಮ್ಮೆ ನೀಡಲಾಗುತ್ತಿದೆ. ಇದರ ಪ್ರಯೋಜನ ಪಡೆದು ರೈತರು ಆರ್ಥಿಕವಾಗಿ ಸಬಲರಾಗಬೇಕು ಎಂದರು.ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ 3 ಲಕ್ಷ ರೂಪಾಯಿ ಅನುದಾನ ಒದಗಿಸಲಾಗುವುದು. ಗ್ರಾಮದಲ್ಲಿ ಕುಡಿಯುವ ನೀರು, ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಅನುದಾನ ಕಲ್ಪಿಸುವಂತೆ ಸಂಬಂಧಪಟ್ಟ ಸಚಿವರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.ಹಿಪ್ಪಳಗಾಂವ್ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಸವಂತರಾವ್ ಎಚ್. ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳ ಉಪಾಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಗುಲ್ಬರ್ಗ- ಬೀದರ್ ಹಾಲು ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನ ಬಿರಾದಾರ್ ಮಾತನಾಡಿದರು.ಗುಲ್ಬರ್ಗ- ಬೀದರ್ ಹಾಲು ಒಕ್ಕೂಟದ ನಿರ್ದೇಶಕರಾದ ಮಲ್ಲಿಕಾರ್ಜುನ ಪಾಟೀಲ್ ಭಂಗೂರು, ಬಸವರಾಜ ಪವಾರ್, ವ್ಯವಸ್ಥಾಪಕ ನಿರ್ದೇಶಕ ಡಾ. ಮಲ್ಲಿಕಾರ್ಜುನ ಬುಕ್ಕಾ, ಸಹಾಯಕ ವ್ಯವಸ್ಥಾಪಕ ಟಿ. ಪ್ರಭಾಕರ, ವಿ.ಎಸ್. ಶ್ರೀನಿವಾಸರಾವ್, ಪಶು ವೈದ್ಯಕೀಯ ಇಲಾಖೆಯ ಉಪ ನಿರ್ದೇಶಕ ಡಾ. ರವಿ ಭೂರೆ, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಚಂದ್ರಕಾಂತ ಹಿಪ್ಪಳಗಾಂವ್, ಪ್ರಮುಖರಾದ ಭೀಮರಾವ ಬಳತೆ, ಕಾಶಿನಾಥ ಪಾಟೀಲ್, ರಾಜಕುಮಾರ ಬಳತೆ, ರಾಮಶೆಟ್ಟಿ ಬಿರಾದಾರ್, ಶಂಕರರಾವ ಪಾಟೀಲ್, ಚನ್ನಬಸಪ್ಪ ಹಾಲಹಳ್ಳಿ, ತಾಲ್ಲೂಕು ಪಂಚಾಯಿತಿ ಸದಸ್ಯ ಸುಭಾಷ ಪಾಟೀಲ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾರುತಿ ಕೋಳಿ, ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಭಗವಂತ ಬಂಬಳಗೆ ಉಪಸ್ಥಿತರಿದ್ದರು. ನಾಗಶೆಟ್ಟಿ ಧರಂಪುರ ಸ್ವಾಗತಿಸಿದರು. ವಿಠಲರಾವ ಬಿರಾದಾರ್ ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.