ಶುಕ್ರವಾರ, ಮೇ 7, 2021
25 °C

`ಕೃಷಿ:ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಾವಗಲ್: ಸದ್ಯದ ಪರಿಸ್ಥಿತಿಯಲ್ಲಿ ಕೃಷಿ ಕ್ಷೇತ್ರದಲ್ಲಿ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಂಡು ಅಧಿಕ ಬೆಳೆ ಬೆಳೆಯುವುದು ಅನಿವಾರ್ಯವಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಬಿ.ಆರ್.ಜಯಣ್ಣ ಅಭಿಪ್ರಾಯಪಟ್ಟರು.

  

ಜಾವಗಲ್ ಹೋಬಳಿ ಹಂದ್ರಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಚ್ಛ ಗ್ರಾಮ ಮಟ್ಟದ ಭೂಚೇತನ ಕೃಷಿ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  ಹೋಬಳಿಯಲ್ಲಿ ಹಲವಾರು ವರ್ಷಗಲಿಂದ ಬರಗಾಲ ಪರಿಸ್ಥಿತಿ ಉಂಟಾಗಿದೆ. ರೈತರು ಧೃತಿಗೆಡದೆ ಆಧುನಿಕ ಬೇಸಾಯ ಪದ್ಧತಿಗಳನ್ನು ಅನುಸರಿಸಿ ಕಡಿಮೆ ವೆಚ್ಚದಲ್ಲಿ ಅಧಿಕ ಉತ್ಪಾದನೆ ಮಾಡಬೇಕು ಎಂದು ತಿಳಿಸಿದರು

 

ಕೃಷಿ ಅಧಿಕಾರಿ ಕುಮಾರಸ್ವಾಮಿ, ತಾಲ್ಲೂಕು ಆತ್ಮ ತಾಂತ್ರಿಕ ವ್ಯವಸ್ಥಾಪಕ ಗೊಮ್ಮಟೇಶ್ ನಾಯಕ್ ಆತ್ಮ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಸವರಾಜು ಅಧ್ಯಕ್ಷತೆ ವಹಿಸಿದ್ದರು. ರೈತ ಮುಖಂಡರಾದ ಸಿದ್ದಯ್ಯ, ಮರುಳಸಿದ್ದಯ್ಯ, ಶಿಕ್ಷಕ ಉಮಾಮಹೇಶ್, ಹೋಬಳಿ ಅನುವುಗಾರರಾದ ಮಲ್ಲೇಶ್, ಪುನೀತ್, ಸಂತೋಷ್, ಸಂದೀಪ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.