ಭಾನುವಾರ, ಮೇ 9, 2021
18 °C

ಕೃಷಿ-ಕೃಷಿ ಆಧಾರಿತ ಉದ್ದಿಮೆ ಉಳಿಸಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಅಮೆರಿಕಾ ಸೇರಿದಂತೆ ಯೂರೋಪ್ ರಾಷ್ಟ್ರಗಳು ಕೃಷಿ ಕ್ಷೇತ್ರ ಮತ್ತು ಕೃಷಿ ಆಧಾರಿತ ಉದ್ದಿಮೆಗಳನ್ನು ಕಡೆಗಣಿಸಿ  ಅದರ ಪರಿಣಾಮವನ್ನು ಅನುಭವಿಸುತ್ತಿವೆ. ಈ ಸ್ಥಿತಿ ಭಾರತದಲ್ಲಿ ಬರುವ ಮುನ್ನ ಎಚ್ಚೆತ್ತು ಕೃಷಿ ಹಾಗೂ ಕೃಷಿ ಆಧಾರಿತ ಉದ್ದಿಮೆಗಳ ಉಳಿವಿಗೆ ಗಂಭೀರ ಚಿಂತನೆ ನಡೆಸಬೇಕಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಮಂಡಳಿ(ಎಫ್‌ಕೆಸಿಸಿಐ)ಯ ಅಧ್ಯಕ್ಷ ಜೆ.ಆರ್. ಬಂಗೇರಾ ಹೇಳಿದರು.ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಸಭಾಭವನದಲ್ಲಿ ಸೋಮವಾರ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಮಂಡಳಿ, ರಾಯಚೂರು ವಾಣಿಜ್ಯೋದ್ಯಮ ಸಂಸ್ಥೆ ಆಶ್ರಯದಲ್ಲಿ ಏರ್ಪಡಿಸಿದ್ದ ಕೃಷಿ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ಕೃಷಿ ಆಧಾರಿತ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸ್ಥಾಪನೆ ಮತ್ತು ಪ್ರೋತ್ಸಾಹಿಸುವುದು ಅವಶ್ಯಕವಾಗಿದೆ. ಈ ದಿಶೆಯಲ್ಲಿ ಕೃಷಿ ಬಂಡವಾಳ ಹೂಡಿಕೆದಾರರ ಸಮಾವೇಶ ಅತ್ಯಂತ ಪ್ರಸ್ತುತವಾಗಿದೆ. ವಿಶೇಷವಾಗಿ ಈ ಭಾಗದಲ್ಲಿ ಹೆಚ್ಚು ಬತ್ತ ಬೆಳೆಯಲಾಗುತ್ತಿದೆ. ರೈಸ್ ಪಾರ್ಕ್ ಸ್ಥಾಪನೆಗಿಂತ ತಮಿಳುನಾಡಿನ ಸೇಲಂನಲ್ಲಿ ಸ್ಥಾಪಿಸಿರುವ ರೈತರು ಮತ್ತು ಕೃಷಿ ಆಧಾರಿತ ಉದ್ಯಮಗಳಿಗೆ ಪೂರಕವಾಗಿ ಚಟುವಟಿಕೆ ನಡೆಸುವ ಸಾಗೋ ಸರ್ವ್ ಪದ್ಧತಿ ಘಟಕ ಸ್ಥಾಪಿಸಿದರೆ ಹೆಚ್ಚು ಉಪಯುಕ್ತ. ಇದರಿಂದ ರೈತರು, ಮಾರಾಟಗಾರರು, ಉದ್ದಿಮೆದಾರರಿಗೆ ಉಪಯುಕ್ತ ಆಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.ಕೃಷಿ ಆಧಾರಿತ ಉದ್ದಿಮೆ, ಸಣ್ಣ ಕೈಗಾರಿಕೆ ಸ್ಥಾಪನೆಗೆ ಜಿಲ್ಲಾಡಳಿತವು ಈ ಭಾಗದಲ್ಲಿ ಕನಿಷ್ಠ 500 ಎಕರೆ ಜಾಗ  ಕಲ್ಪಿಸಿದರೆ ಅನುಕೂಲವಾಗುತ್ತದೆ. ಕೈಗಾರಿಕೆ ಸ್ಥಾಪನೆಗೆ ಎಲ್ಲ ರೀತಿಯ ಸೌಕರ್ಯವನ್ನು ಈ ಜಿಲ್ಲೆ ಹೊಂದಿದೆ ಎಂದು ಹೇಳಿದರು. ಕೃಷಿ ವಿವಿ ಕುಲಪತಿ ಡಾ.ಬಿ.ವಿ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.