ಭಾನುವಾರ, ಏಪ್ರಿಲ್ 11, 2021
29 °C

ಕೃಷಿ ಕ್ಷೇತ್ರದ ಬಿಕ್ಕಟ್ಟಿನಿಂದ ರೈತರ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಕೃಷಿ ಕ್ಷೇತ್ರ ಎದುರಿಸುತ್ತಿರುವ ಬಿಕ್ಕಟ್ಟಿನಿಂದಾಗಿ ರೈತರು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ಗುಳೆ ಹೋಗಿ ವೃದ್ಧರು ಮಾತ್ರ ಉಳಿದಿದ್ದಾರೆ. ಸಮಾಜ ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸಂಕಷ್ಟಗಳನ್ನು ದೂರ ಮಾಡುವಂತಹ ಸಾಹಿತ್ಯಗಳು ಮಾಧ್ಯಮಗಳಲ್ಲಿ ಪ್ರಕಟವಾಗಬೇಕು~ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಹೇಳಿದರು.ಅಭಿನವ, ವಡ್ಡರ್ಸೆ ರಘುರಾಮ ಶೆಟ್ಟಿ ಪ್ರತಿಷ್ಠಾನ ಹಾಗೂ ಅವಧಿಯ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರ `ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್~ ಕೃತಿಯ ಕನ್ನಡ ಅನುವಾದ `ಬರ ಅಂದ್ರೆ ಎಲ್ಲರಿಗೂ ಇಷ್ಟ~ ಕೃತಿಯನ್ನು ಭಾನುವಾರ ಬಿಡುಗಡೆ ಮಾಡಿ ಮಾತನಾಡಿದರು.`ಗ್ರಾಮೀಣ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಎಚ್ಚರಿಕೆ ಗಂಟೆ ಬಾರಿಸಿರುವ ಪಿ. ಸಾಯಿನಾಥ್ ಅವರ ಮಾದರಿಯನ್ನು ಪತ್ರಕರ್ತರು ಅನುಸರಿಸಿ ಪತ್ರಿಕೋದ್ಯಮ ಕ್ಷೇತ್ರವನ್ನು ಉಳಿಸಬೇಕು. ಜನರು ಕತ್ತಲಿನಲ್ಲಿದ್ದು ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ಅವರನ್ನು ಬೆಳಕಿನತ್ತ ಕರೆದೊಯ್ಯುವ ಬರವಣಿಗೆಯ ಅಗತ್ಯ ಇದೆ~ ಎಂದು ಅವರು ಪ್ರತಿಪಾದಿಸಿದರು.ಹಿರಿಯ ಸಾಹಿತಿ ದೇವನೂರ ಮಹಾದೇವ, ಹಿರಿಯ ಪತ್ರಕರ್ತರಾದ ಪಿ.ಸಾಯಿನಾಥ್, ಪಾರ್ವತಿ ಮೆನನ್, ಪೆಂಗ್ವಿನ್ ಇಂಡಿಯಾದ ಚಿಕಿ ಸರ್ಕಾರ್, ಅಭಿನವ ಪ್ರಕಾಶನದ ನ.ರವಿಕುಮಾರ್, ವಡ್ಡರ್ಸೆ ರಘುರಾಮ ಶೆಟ್ಟಿ ಪ್ರತಿಷ್ಠಾನದ ಅಧ್ಯಕ್ಷ ಕೆ.ಪುಟ್ಟಸ್ವಾಮಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೌಂಟರ್ ಇಂಡಿಯಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.