ಹಾವೇರಿ: ಪ್ರಸಕ್ತ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗಾಗಿ ಸಾಧಕ ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ವಲಯದಲ್ಲಿ ಗಮನಾರ್ಹ ಸಾಧನೆಗೈದ, ಮಣ್ಣು, ನೀರು ಮತ್ತು ನೈಸರ್ಗಿಕ ಸಂಪನ್ಮೂಲ ಸದ್ಭಳಕೆಯಿಂದ ಸಾಗುವಳಿಯಲ್ಲಿ ಅಧಿಕ ಗುಣಮಟ್ಟದ ಉತ್ಪಾದನೆ ಬರುವಂತೆ ಬದಲಾವಣೆ ತಂದಿರುವ, ರೈತರ ಆರ್ಥಿಕ ಮಟ್ಟ ಸುಧಾರಣೆಗೆ ಅನುವಾ ಗುವಂತೆ ಸೃಜನಾತ್ಮಕ ಕಾರ್ಯದಿಂದ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಹಾಗೂ ಮಾರ್ಗದರ್ಶಕರಾಗಿ ಶ್ರಮಿಸುತ್ತಿರುವ ರೈತರು ಅರ್ಜಿ ಸಲ್ಲಿಸಲು ಅರ್ಹರು.

ಕೇಂದ್ರ, ರಾಜ್ಯ ಸರ್ಕಾರ ಅಥವಾ ಅಂಗ ಸಂಸ್ಥೆಗಳಿಂದ ಈ ಸಾಧನೆಗೆ ಈಗಾಗಲೇ ಪುರಸ್ಕೃತರಾದವರು ಮತ್ತು ಕೇಂದ್ರ, ರಾಜ್ಯ ಸರ್ಕಾರದ ಮತ್ತು ಸರ್ಕಾರದ ಅಂಗ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ನಿವೃತ್ತರಾದವರು ಈ ಪ್ರಶಸ್ತಿಗೆ ಅರ್ಹರಲ್ಲ. ಪ್ರಶಸ್ತಿಯ ವಿವರ ಮತ್ತು ಅರ್ಜಿ ನಮೂನೆಗಳನ್ನು ಸಂಬಂಧಿತ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರಗಳಿಂದ ಪಡೆಯಬಹುದು.

ನಾಮ ನಿರ್ದೇಶನ ಪತ್ರಗಳನ್ನು ಕಡ್ಡಾಯವಾಗಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು, ಕೃಷಿ ವಿಶ್ವವಿದ್ಯಾನಿಲಯಗಳ ತಜ್ಞರ ಶಿಫಾರಸ್ಸಿನೊಂದಿಗೆ ಜಂಟಿ ಕೃಷಿ ನಿರ್ದೇಶಕರು (ವಿಸ್ತರಣೆ ಮತ್ತು ತರಬೇತಿ) ಕೃಷಿ ಆಯುಕ್ತಾಲಯ, ಶೇಷಾದ್ರಿ ರಸ್ತೆ, ಬೆಂಗಳೂರು-560 001 ಇವರಿಗೆ ಕಳುಹಿಸಲು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.