ಕೃಷಿ ಬಜೆಟ್ ಅನಗತ್ಯ

7

ಕೃಷಿ ಬಜೆಟ್ ಅನಗತ್ಯ

Published:
Updated:

ಮಡಿಕೇರಿ: ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿಗಳು ಹೇಳಿಕೆ ನೀಡಿರುವುದು ಜನರಿಗೆ ಮಂಕು ಬೂದಿ ಎರಚುವ ತಂತ್ರವಷ್ಟೇ. ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಬೇಕಾದರೆ ಅದಕ್ಕೆ ಪ್ರತ್ಯೇಕವಾದ ವರಮಾನ- ಖರ್ಚು ತೋರಿಸಬೇಕು. ಆದರೆ, ಕೃಷಿಯಲ್ಲಿ ವರಮಾನ ಎಲ್ಲಿದೆ? ಹೀಗಾಗಿ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಿದರೂ ಅದರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಪ್ರತಿಪಾದಿಸಿದರು.ಕೊಡಗು ಜಿಲ್ಲಾ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಬಿ.ಟಿ. ಪ್ರದೀಪ್ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ  ಪಾಲ್ಗೊಂಡು ಅವರು ಮಾತನಾಡಿದರು.‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮೇಲೆ ಎರಡು ತೂಗುಕತ್ತಿ ನೇತಾಡುತ್ತಿರುವುದರಿಂದ ಯಾವುದೇ ಸಮಯದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ಎದುರಾದರೂ ಅಚ್ಚರಿ ಪಡುವಂತಿಲ್ಲ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry