ಕೃಷಿ ಭೂಮಿ ಸ್ವಾಧೀನ ತಡೆಗೆ ಯತ್ನ: ಹಾಲಪ್ಪ

ಗುರುವಾರ , ಮೇ 23, 2019
24 °C

ಫಲಿತಾಂಶ (ಮುನ್ನಡೆ+ಗೆಲುವು) 0/542

ಕೃಷಿ ಭೂಮಿ ಸ್ವಾಧೀನ ತಡೆಗೆ ಯತ್ನ: ಹಾಲಪ್ಪ

Published:
Updated:

ಸಾಗರ: ತಾಲ್ಲೂಕಿನ ಕುಗ್ವೆ ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ ವಸತಿ ಉದ್ದೇಶಕ್ಕಾಗಿ 101 ಎಕರೆ ಕೃಷಿಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವು ದನ್ನು ತಡೆಯಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಶಾಸಕ ಎಚ್. ಹಾಲಪ್ಪ ಹೇಳಿದರು.ಕುಗ್ವೆ ಗ್ರಾಮದಲ್ಲಿ ಮಂಗಳವಾರ ಉದ್ದೇಶಿತ ಭೂಸ್ವಾಧೀನ ಪ್ರದೇಶದ ಪರಿಶೀಲನೆ ನಡೆಸಿದ ನಂತರ ಗ್ರಾಮಸ್ಥರು ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಬೆಳೆ ಬೆಳೆದಿರುವ ಹಾಗೂ ಈಗಾಗಲೇ ಮನೆ ಇರುವ ಇಲ್ಲಿನ ಪ್ರದೇಶವನ್ನು ವಸತಿ ಉದ್ದೇಶಕ್ಕೆ ಗೃಹಮಂಡಳಿ ಸ್ವಾಧೀನಕ್ಕೆ ಪಡೆಯಲು ಮುಂದಾಗಿರುವುದು ಸರಿಯಲ್ಲ ಎಂದರು.ಕರ್ನಾಟಕ ಗೃಹಮಂಡಳಿ ಭೂಸ್ವಾಧೀನ ಪ್ರಕ್ರಿಯೆ ಮಾಡುವ ಸಂಬಂಧ ಪ್ರಕಟಣೆ ಹೊರಡಿಸಿದ ಮಾತ್ರಕ್ಕೆ ರೈತರು ಆತಂಕ ಪಡುವ ಅಗತ್ಯವಿಲ್ಲ. ಈ ವಿಷಯದಲ್ಲಿ ಅನಾವಶ್ಯಕವಾಗಿ ನನ್ನ ಹೆಸರನ್ನು ಎಳೆಯಲಾಗುತ್ತಿದೆ.ನನ್ನ ಗಮನಕ್ಕೆ ಬಾರದೆ ಗೃಹಮಂಡಳಿ ಪ್ರಕಟಣೆ ಹೊರಡಿಸಿದೆ. ಹೀಗಿರುವಾಗ ರೈತರಿಗೆ ತೊಂದರೆಯಾಗದಂತೆ ಸಮಸ್ಯೆ ಬಗೆಹರಿಸುವುದು ಮುಖ್ಯವೇ ಹೊರತು ವಿಷಯವನ್ನು ರಾಜಕೀಕರಣಗೊಳಿಸುವ ಅಗತ್ಯವಿಲ್ಲ ಎಂದು ಹೇಳಿದರು.ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ಕುಗ್ವೆ ಗ್ರಾಮದಲ್ಲಿ ರೈತರ ಕೃಷಿಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವಂತೆ ಒತ್ತಾಯಿಸಿ ಈಗಾಗಲೇ ಗೃಹ ಮಂಡಳಿಗೆ ಪತ್ರ ಬರೆದಿದ್ದೇನೆ. ವಸತಿ ಉದ್ದೇಶಕ್ಕೆ ಬೇಡಿಕೆ ಇಲ್ಲದೆ ಇದ್ದರೂ ಗೃಹಮಂಡಳಿ ರೈತರ ಭೂಮಿಯನ್ನು ಸ್ವಾಧೀನಕ್ಕೆ ಪಡೆಯಲು ಮುಂದಾಗಿರುವುದು ಸರಿಯಲ್ಲ ಎಂದರು.ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ರವಿಕುಗ್ವೆ, ಜಿ.ಪಂ. ಸದಸ್ಯೆ ಲಲಿತಾ ನಾರಾಯಣ್, ತಾ.ಪಂ. ಸದಸ್ಯ ಮಹಾಬಲೇಶ್ವರ್, ಗ್ರಾ.ಪಂ. ಅಧ್ಯಕ್ಷ ಕೃಷ್ಣಮೂರ್ತಿ, ಈಶ್ವರ್‌ನಾಯ್ಕ, ಅ.ರಾ. ಶ್ರೀನಿವಾಸ್, ವಿ.ಟಿ. ಸ್ವಾಮಿ, ಎಚ್.ಎಲ್. ರಾಘವೇಂದ್ರ ಇನ್ನಿತರರು ಹಾಜರಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry