ಕೃಷಿ ಮಾಹಿತಿ ಆಂದೋಲನ: ಪ್ರಚಾರ ಕಾರ್ಯಕ್ಕೆ ಚಾಲನೆ

7

ಕೃಷಿ ಮಾಹಿತಿ ಆಂದೋಲನ: ಪ್ರಚಾರ ಕಾರ್ಯಕ್ಕೆ ಚಾಲನೆ

Published:
Updated:

ಶ್ರೀರಂಗಪಟ್ಟಣ: ಡಿ.23ರಂದು ಪಟ್ಟಣದಲ್ಲಿ ನಡೆಯುವ ಕೃಷಿ ಮಾಹಿತಿ ಆಂದೋಲದ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಕ್ಕೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಸಂಗಯ್ಯ ಗುರುವಾರ ಪಟ್ಟಣದಲ್ಲಿ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಡಿ.23ರಂದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯುವ ಕೃಷಿ ಮಾಹಿತಿ ಅಂದೋಲನದಲ್ಲಿ ರೈತರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು. ಯಾಂತ್ರಿಕ ಹಾಗೂ ಸುಧಾರಿತ ಬೇಸಾಯ ಕ್ರಮ ಕುರಿತು ಅಂದು ತಜ್ಞರು ಮಾಹಿತಿ ನೀಡಲಿದ್ದಾರೆ.

ವಿವಿಧ ಕೃಷಿ ಯಂತ್ರೋಪಕರಣ ತಯಾರಿಕಾ ಕಂಪೆನಿಗಳು ಆಂದೋಲನದಲ್ಲಿ ಪಾಲ್ಗೊಳ್ಳಲಿವೆ. ಕೃಷಿ ಅಷ್ಟೇ ಅಲ್ಲದೆ ರೇಷ್ಮೆ, ತೋಟಗಾರಿಕೆ, ಅರಣ್ಯ, ಜಲಸಂಪನ್ಮೂಲ, ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ.ಯೋಗೇಶ್ವರ್ ಆಂದೋಲನ ಉದ್ಘಾಟಿಸಲಿದ್ದು, ಶಾಸಕ ರಮೇಶ ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.ಸಹಾಯಕ ಕೃಷಿ ನಿರ್ದೇಶಕ ವೆಂಕಟರಾಮು ಮಾತನಾಡಿ, ಡಿ. 23ರ ವೇಳೆಗೆ ತಾಲ್ಲೂಕಿನಲ್ಲಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೃಷಿ ಆಂದೋಲನ ಕುರಿತು ವ್ಯಾಪಕ ಪ್ರಚಾರ ನಡೆಸಲಾಗುವುದು.

ಅರಕೆರೆ, ಕೆ.ಶೆಟ್ಟಹಳ್ಳಿ, ಬೆಳಗೊಳ ಹಾಗೂ ಕಸಬಾ ಹೋಬಳಿಯ ಗ್ರಾಮಗಳ ರೈತರಿಗೆ ಆಂದೋಲದ ಬಗ್ಗೆ ಕೃಷಿ ಸಹಾಯಕ ಅಧಿಕಾರಿಗಳು ಹಾಗೂ ಅನುವುಗಾರರು ಮಾಹಿತಿ ನೀಡಲಿದ್ದಾರೆ. ಕೃಷಿಕ ಸಮಾಜ, ರೈತಶಕ್ತಿ ಗುಂಪುಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು ರೈತರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು. ಸಹಾಯಕ ಕೃಷಿ ಅಧಿಕಾರಿ ಸ್ವಾಮಿಶೆಟ್ಟಿ, ತಾಂತ್ರಿಕ ಸಹಾಯಕ ಸುರೇಶ್ ಇದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry