ಶುಕ್ರವಾರ, ಡಿಸೆಂಬರ್ 13, 2019
20 °C

ಕೃಷಿ: ರೂ.2,500 ಕೋಟಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷಿ: ರೂ.2,500 ಕೋಟಿಗೆ ಒತ್ತಾಯ

ಬೆಂಗಳೂರು: ಮುಂದಿನ ಹಣಕಾಸು ವರ್ಷದ ಬಜೆಟ್‌ನಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ರೂ. 2,500 ಕೋಟಿ  ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಬಜೆಟ್‌ಪೂರ್ವ ಚರ್ಚೆಯ ವೇಳೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಉಮೇಶ್ ಕತ್ತಿ ಹೇಳಿದರು.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ಕೃಷಿ ಪದವೀಧರ ಅಧಿಕಾರಿಗಳ ಸಂಘ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ `ಅಗ್ರಿ ಡಾಕ್ಟರ್ ಡೈರಿ-2012~ ಮತ್ತು `ಕೃಷಿ ಕ್ಯಾಲೆಂಡರ್-2012~ ಬಿಡುಗಡೆ ಮಾಡಿ ಮಾತನಾಡಿದ ಅವರು, `ಈ ವರ್ಷ ್ಙ 1 ಲಕ್ಷ ಕೋಟಿ ಮೊತ್ತದ ಬಜೆಟ್ ಮಂಡನೆ ಆಗಲಿದೆ.ಈ ಹಿನ್ನೆಲೆಯಲ್ಲಿ ಕೃಷಿಗೆ ್ಙ 800 ಕೋಟಿ, ಕೃಷಿ ವಿಶ್ವವಿದ್ಯಾಲಯಗಳಿಗೆ ್ಙ 500 ಕೋಟಿ, ಜಲಾನಯನ ಇಲಾಖೆಗೆ ್ಙ 500 ಕೋಟಿ ಸೇರಿದಂತೆ ಒಟ್ಟ್ಙು 2,500 ಕೋಟಿ ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗುವುದು~ ಎಂದರು. ಪ್ರಸಕ್ತ ವರ್ಷ ರಾಜ್ಯದಲ್ಲಿ 140 ಲಕ್ಷ ಟನ್ ಆಹಾರ ಧಾನ್ಯಗಳ ಉತ್ಪಾದನೆ ನಿರೀಕ್ಷಿಸಲಾಗಿತ್ತು. 99 ತಾಲ್ಲೂಕುಗಳಲ್ಲಿ ಬರ ಇರುವುದರಿಂದ ಕೆಲವೆಡೆ ಉತ್ಪಾದನೆ ಕುಂಠಿತವಾಗಿದೆ.

 

ಕೃಷಿ ಬಜೆಟ್ ಮಂಡನೆ ಮತ್ತು ಅನುಷ್ಠಾನ, ಹೊಸ ಯೋಜನೆಗಳು, ಕೃಷಿ ಯಾಂತ್ರೀಕತೆಗೆ ಆದ್ಯತೆಯಂತಹ ಕ್ರಮಗಳಿಂದಾಗಿ ಈ ಬಾರಿಯೂ 125 ಲಕ್ಷ ಟನ್ ಉತ್ಪಾದನೆ ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ 2012-13ನೇ ಸಾಲಿನಲ್ಲೂ ಕೃಷಿ ಬಜೆಟ್ ಮಂಡಿಸುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗುವುದು ಎಂದರು.600 ಸಿಬ್ಬಂದಿ ನೇಮಕ: ಕೃಷಿ ಇಲಾಖೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕೊರತೆ ಇದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 200 ಅಧಿಕಾರಿಗಳು, ನೌಕರರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ 600 ಅಧಿಕಾರಿಗಳು ಮತ್ತು ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದರು.

ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಸಂದೀಪ್ ದವೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇಲಾಖೆಯ ಆಯುಕ್ತ ಬಾಬುರಾವ್ ಮುಡಬಿ, ನಿರ್ದೇಶಕ ಡಾ.ಕೆ.ವಿ.ಸರ್ವೇಶ್, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಎಂ.ಎಸ್.ಗೌಡರ್, ನಿರ್ದೇಶಕ ಡಾ.ಎ.ರಾಜಣ್ಣ, ಕರ್ನಾಟಕ ಕೃಷಿ ಪದವೀಧರ ಅಧಿಕಾರಿಗಳ ಸಂಘದ ಅಧ್ಯಕ್ಷ ಡಾ.ಆರ್.ಜಿ.ಗೊಲ್ಲರ್, ಪ್ರಧಾನ ಕಾರ್ಯದರ್ಶಿ ಎಸ್.ಎಂ.ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)