ರಾಯಚೂರು: ಕೃಷಿ ವಿಶ್ವವಿದ್ಯಾಲಯಗಳಿಗೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಕೃಷಿ ವಿಶ್ವವಿದ್ಯಾಲಯಗಳಿಗೆ ಸೌಲಭ್ಯಗಳು ದೊರಕಿಲ್ಲ. ಕೃಷಿ ವಿವಿಯಿಂದ ಸೌಲಭ್ಯಗಳು ವಿಶ್ವವಿದ್ಯಾಲಯಕ್ಕೆ ಸೀತವಾಗಬಾರದು. ರೈತರ ಅನುಕೂಲವಾಗುವ ರೀತಿಯಲ್ಲಿ ಕೃಷಿ ವಿವಿಗಳು ಕಾರ್ಯನಿರ್ವಹಿಸಬೇಕು. ಅಂದಾಗ ಮಾತ್ರ ಸರ್ಕಾರದ ಉದ್ದೇಶ ಸಕಾರಗೊಳ್ಳುತ್ತದೆ ಎಂದು ತಿಳಿಸಿದರು.

ಸಾವಯವ ಕೃಷಿ ಪ್ರತ್ಯೇಕವಾಗಿದೆ.ಅದನ್ನು ಅಳವಡಿಸಿಕೊಳ್ಳುವುದು ಬಿಡುವುದು ರೈತರಿಗೆ ಬಿಟ್ಟ ವಿಚಾರವಾಗಿದೆ. ಸಾವಯವ ಕೃಷಿಯನ್ನು ಮುಂದುವರಿಸಲು ಸರ್ಕಾರ ಬೆಂಬಲಿಸುತ್ತದೆ. ಆದರೆ, ಅದರ ಹೆಸರಿನಲ್ಲಿ ಪಕ್ಷ ಕಟ್ಟುವಂಥ ಸಂಘಟನೆ ಮಾಡುವುದರನ್ನು ಸರ್ಕಾರ ಆಕ್ಷೇಪಿಸುತ್ತದೆ ಎಂದು ತಿಳಿಸಿದರು.

ಕೃಷಿ ಇಲಾಖೆಯ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ನಕಲಿ ಹತ್ತಿ ಬೀಜ ಮಾರಾಟಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ನಕಲಿ ಬೀಜಗಳ ಮಾರಾಟ ತಡೆಗಟ್ಟು ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಿಂಧನೂರು ತಾಲ್ಲೂಕಿನ ಜವಳಗೇರಾ ಕೇಂದ್ರ ತೋಟಗಾರಿ ರಾಜ್ಯದ ಕೃಷಿ ವಿವಿಗೆ ಒಪ್ಪಿಸಲು ಪ್ರಸ್ತಾವನೆ ಸಲ್ಲಿಸಲಾಗುವುದು. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಅಗತ್ಯಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.