ಕೃಷ್ಣಪ್ಪ ಕೊಲೆ: ಮತ್ತೆ ನಾಲ್ಕು ಜನರ ಬಂಧನ

ಗುರುವಾರ , ಮೇ 23, 2019
29 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಕೃಷ್ಣಪ್ಪ ಕೊಲೆ: ಮತ್ತೆ ನಾಲ್ಕು ಜನರ ಬಂಧನ

Published:
Updated:

ನೆಲಮಂಗಲ:  ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕ ಬಿ.ಎಂ.ಎಲ್. ಕೃಷ್ಣಪ್ಪ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಪೇರ್ಲ ಪ್ರಕಾಶ್‌ಗೌಡ (28), ಮಾಗಡಿ ತಾಲ್ಲೂಕಿನ ಮೋಟಗಾನಹಳ್ಳಿ ಗ್ರಾಮದ ಮಂಜುನಾಥ್ (23), ಶ್ರವಣಬೆಳಗೊಳದ ಎನ್.ಎಸ್.ಮಧು (27), ನೆಲಮಂಗಲದ ಎಂ.ಜಿ.ರಸ್ತೆಯ ನಿವಾಸಿ, ಆಟೋ ಚಾಲಕ ಸತೀಶ್ ಅವರನ್ನು ಕೆಂಗೇರಿ ಬಳಿ ಬಂಧಿಸಿ, ಅವರನ್ನು ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಡಿವೈಎಸ್ಪಿ ಕೆ.ಎಂ. ಚಿನ್ನಸ್ವಾಮಿ ತಿಳಿಸಿದ್ದಾರೆ.ಕೃತ್ಯಕ್ಕೆ ಬಳಸಿದ ಪ್ರಕಾಶ್‌ಗೌಡ ಅವರ ಸ್ಕೋಡಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 19 ಆರೋಪಿಗಳನ್ನು ಬಂಧಿಸಲಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry