ಕೃಷ್ಣಪ್ಪ ವಶಕ್ಕೆ

ಮಂಗಳವಾರ, ಜೂಲೈ 23, 2019
25 °C

ಕೃಷ್ಣಪ್ಪ ವಶಕ್ಕೆ

Published:
Updated:

ಬೆಂಗಳೂರು: ಮದ್ಯದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ನಾಲ್ವರ ಸಾವಿಗೆ ಕಾರಣರಾಗಿದ್ದ ಬೊಮ್ಮನಹಳ್ಳಿ ನಗರಸಭೆಯ ಮಾಜಿ ಅಧ್ಯಕ್ಷ ಕೃಷ್ಣಪ್ಪ ಅವರನ್ನು ಒಂದು ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಸಿಜೆಎಂ ನ್ಯಾಯಾಲಯ ಗುರುವಾರ ಆದೇಶಿಸಿದೆ.ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಜೈಲಿನಲ್ಲಿರುವ ಕೃಷ್ಣಪ್ಪ ಅವರನ್ನು ಶುಕ್ರವಾರ ಬೆಳಿಗ್ಗೆ 6ಕ್ಕೆ ಕಸ್ಟಡಿಗೆ ಪಡೆದು ಸಂಜೆ 6ಕ್ಕೆ ಜೈಲಿಗೆ ಕರೆದೊಯ್ಯಬೇಕು ಎಂದು ಆದೇಶಿಸಿದರು.`ನ್ಯಾಯಾಲಯದ ನಿರ್ದೇಶನದಂತೆ ಕೃಷ್ಣಪ್ಪ ಅವರನ್ನು ಕಸ್ಟಡಿಗೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು. ಬಳಿಕ ಅವರನ್ನು ವಿಚಾರಣೆಗೊಳಪಡಿಸಿ ಘಟನೆ ಬಗ್ಗೆ ಮಾಹಿತಿ ಕಲೆ ಹಾಕಲಾಗುವುದು. ವೈದ್ಯಕೀಯ ತಪಾಸಣೆ ವರದಿ ಕೈ ಸೇರಿದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಬಿ. ದಯಾನಂದ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry