ಶುಕ್ರವಾರ, ಏಪ್ರಿಲ್ 16, 2021
31 °C

ಕೃಷ್ಣಪ್ಪ ಹತ್ಯೆ ಆರೋಪಿಗಳನ್ನು ಕೂಡಲೇ ಬಂಧಿಸಿ: ಮೊಯಿಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೆಲಮಂಗಲ: ಟಿ. ಬೇಗೂರು ಕ್ಷೇತ್ರದ ಜಿ.ಪಂ. ಸದಸ್ಯ ಬಿ.ಎಂ.ಎಲ್. ಕೃಷ್ಣಪ್ಪ ಅವರನ್ನು ಹತ್ಯೆ ಮಾಡಿದ ಪ್ರಮುಖ ಆರೋಪಿಗಳನ್ನು ಕೂಡಲೇ ಬಂಧಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಎಂ. ವೀರಪ್ಪ ಮೊಯಿಲಿ ಭಾನುವಾರ ಇಲ್ಲಿ ಒತ್ತಾಯಿಸಿದರು.

ಸ್ಥಳೀಯ ಗೋಪಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದ ನಂತರ ಮಾತನಾಡಿದ ಅವರು, ಕೃಷ್ಣಪ್ಪ ಅವರ ಸಾವಿನಿಂದ ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ವಿಷಾದಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, `ಕೃಷ್ಣಪ್ಪನವರ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ಕರುಣಿಸಲಿ~ ಎಂದು ಕೋರಿದರು.

ಮಾಜಿ ಸಚಿವ ಆಂಜನಮೂರ್ತಿ, ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ, ಶಾಸಕರಾದ ಎಸ್.ಆರ್.ವಿಶ್ವನಾಥ್, ಎಂ.ವಿ. ನಾಗರಾಜು, ಪುರಸಭೆ ಅಧ್ಯಕ್ಷ ಪಿಳ್ಳಪ್ಪ, ಉಪಾಧ್ಯಕ್ಷ ಹೇಮಂತಕುಮಾರ್, ತಾ.ಪಂ. ಅಧ್ಯಕ್ಷ ಲಕ್ಷ್ಮೀನಾರಾಯಣ, ಜಿ.ಪಂ. ಸದಸ್ಯರಾದ ರಾಮು, ಸುನಂದ ಶಿವಕುಮಾರ್, ಖಲೀಮುಲ್ಲಾ, ವಕೀಲ ಕೇಶವಮೂರ್ತಿ, ಬ್ಯಾಡರಹಳ್ಳಿ ರಾಜಶೇಖರ್, ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಮುಖಂಡರು, ಗ್ರಾ.ಪಂ., ತಾ.ಪಂ., ಜಿ.ಪಂ. ಸದಸ್ಯರು, ಅಪಾರ ಅಭಿಮಾನಿಗಳು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.