ಕೃಷ್ಣಯ್ಯ ಶೆಟ್ಟಿ ಜಾಮೀನು ವಿಚಾರಣೆ ಮುಂದೂಡಿಕೆ

7

ಕೃಷ್ಣಯ್ಯ ಶೆಟ್ಟಿ ಜಾಮೀನು ವಿಚಾರಣೆ ಮುಂದೂಡಿಕೆ

Published:
Updated:

ಬೆಂಗಳೂರು: ಭೂಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರು, ಲೋಕಾಯುಕ್ತ ವಿಶೇಷ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿರುವ ಅರ್ಜಿಯ ವಿಚಾರಣೆಯನ್ನು ಬುಧವಾರ ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ.ವೈದ್ಯಕೀಯ ಅಂಶಗಳ ಆಧಾರದ ಮೇಲೆ ತಮಗೆ ಜಾಮೀನು ನೀಡುವಂತೆ ಕೋರಿ ಕೃಷ್ಣಯ ಶೆಟ್ಟಿ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಬಿ.ವಿ.ಪಿಂಟೊ ಅವರು ಗುರುವಾರಕ್ಕೆ ಮುಂದೂಡಿದರು.

 

ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನಾರೋಗ್ಯದ ಸಮಸ್ಯೆಗಳನ್ನು ಮುಂದಿಟ್ಟು ಹೈಕೋರ್ಟ್‌ನಲ್ಲಿ ಜಾಮೀನು ಕೋರಿ ಸಲ್ಲಿರುವ ಜಾಮೀನು ಅರ್ಜಿಯ ವಿಚಾರಣೆ ಸಹ ಗುರುವಾರ ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry