ಗುರುವಾರ , ಜನವರಿ 23, 2020
23 °C

ಕೃಷ್ಣಾ ತೀರ್ಪು: ತಜ್ಞರೊಂದಿಗೆ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: ಕೃಷ್ಣಾ ನ್ಯಾಯಮಂಡಳಿ ನೀಡಿರುವ ತೀರ್ಪಿನ ಕುರಿತು ಇದೇ 15 ಮತ್ತು 16ರಂದು ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.‘ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳಿಗೆ ನೇಮಕ ಕುರಿತು  ಪಕ್ಷದ ಹೈಕಮಾಂಡ್‌ ಜೊತೆಗೆ ಚರ್ಚಿಸಲಾಗುವುದು. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿಯೂ ಜನ ಸಂಪರ್ಕ ಸಭೆಗಳನ್ನು ನಡೆಸಲಾಗುವುದು’ ಎಂದ ಅವರು, ಪಂಚರಾಜ್ಯಗಳ ಚುನಾವಣಾ ಫಲಿತಾಂಶ ರಾಜ್ಯದಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. ಇಲ್ಲಿ ಮೋದಿ ಅಲೆಯೂ ಇಲ್ಲ ಎಂದು ಇಲ್ಲಿ ಸುದ್ದಿಗಾರರ ಪ್ರಶ್ನೆಗೆ  ಉತ್ತರಿಸಿದರು.

ಪ್ರತಿಕ್ರಿಯಿಸಿ (+)