ವಿಜಾಪುರ: ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಸಮ್ಮತಿಸಿದ್ದಾರೆ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

`ಈ ವಿಷಯವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ. ನೀರಿನ ತುರ್ತು ಅವಶ್ಯಕತೆ ಬಗ್ಗೆ ಲಿಖಿತ ಮನವಿ ಸಲ್ಲಿಸಿ. ಸಂಪುಟ ಸಭೆಯಲ್ಲಿ ಚರ್ಚಿಸಿ ನೀರು ಬಿಡಲು ಪ್ರಯತ್ನಿಸುತ್ತೇನೆ ಎಂಬ ಭರವಸೆ ನೀಡಿದ್ದಾರೆ~ ಎಂದು ಖರ್ಗೆ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

`ಕೊಯ್ನಾ ಜಲಾಶಯದಿಂದ ಐದು ಟಿಎಂಸಿ ನೀರು ಬಿಡಿಸಲು ಸಹಕಾರ ನೀಡಬೇಕು ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ದೂರವಾಣಿ ಮೂಲಕ ನನ್ನನ್ನು ಕೋರಿದ್ದರು. ಆದರೆ, ರಾಜ್ಯ ಸರ್ಕಾರ ಈವರೆಗೂ ನನಗೆ ಲಿಖಿತವಾಗಿ ಯಾವ ಮಾಹಿತಿಯನ್ನೂ ನೀಡಿಲ್ಲ~ ಎಂದರು.

`ರಾಜ್ಯ ಸರ್ಕಾರದಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಕೃಷ್ಣಾ ನದಿಗೆ ಐದು ಟಿಎಂಸಿ ಅಡಿ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಾನೂ ಪತ್ರ ಬರೆಯುತ್ತೇನೆ~ ಎಂದರು.

`ಹೈದರಾಬಾದ್-ಕರ್ನಾಟಕ ಪ್ರದೇಶದ ಜೊತೆಗೆ ವಿಜಾಪುರ ಜಿಲ್ಲೆಗೂ ವಿಶೇಷ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ಬಗ್ಗೆ ನಾನೇನೂ ಹೇಳುವುದಿಲ್ಲ. ಈ ವಿಷಯದಲ್ಲಿ ವಿವಾದ ಹುಟ್ಟು ಹಾಕಲೂ ಬಯಸುವುದಿಲ್ಲ~ ಎಂದು ಖರ್ಗೆ ಹೇಳಿದರು.

`ಹೈದರಾಬಾದ್ ಕರ್ನಾಟಕದ ಸ್ಥಿತಿಗತಿಯೇ ಬೇರೆ. ಹೈದರಾಬಾದ್ ಕರ್ನಾಟಕ, ತೆಲಂಗಾಣ, ವಿದರ್ಭದ ಸ್ಥಿತಿ ಒಂದೇ ತರಹದ್ದಾಗಿದೆ. ವಿಜಾಪುರ ಜಿಲ್ಲೆಗೂ ವಿಶೇಷ ಸ್ಥಾನಮಾನ ಕಲ್ಪಿಸುತ್ತೇವೆ ಎಂಬ ಸುಳ್ಳು ಭರವಸೆಯನ್ನೂ ನಾನು ನೀಡುವುದಿಲ್ಲ~ ಎಂದು ಅವರು ಹೇಳಿದರು.

`ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವುದು ರಾಜ್ಯ ಸರ್ಕಾರಗಳ ಕರ್ತವ್ಯ. ರಾಜ್ಯಗಳು ಕೇಳಿದಷ್ಟು ಹಣವನ್ನು ಕೇಂದ್ರದಲ್ಲಿದ್ದ ಯಾವ ಸರ್ಕಾರಗಳೂ ಕೊಟ್ಟಿಲ್ಲ. ಈಗ ಕೇಂದ್ರ ಸರ್ಕಾರ ಕೊಟ್ಟಿರುವ ಹಣದಲ್ಲಿ ಶೇ 40ರಷ್ಟನ್ನೂ ರಾಜ್ಯ ಸರ್ಕಾರ ಖರ್ಚು ಮಾಡಿಲ್ಲ. ತಮ್ಮಲ್ಲಿರುವ ಹಣವನ್ನೆಲ್ಲ ಮೊದಲು ಖರ್ಚು ಮಾಡಲಿ. ಆ ನಂತರ ನಾವೇ ಮುಂದೆನಿಂತು ಹಣ ಕೊಡಿಸುತ್ತೇವೆ~ ಎಂದು ಹೇಳಿದರು.

`ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಇಲಾಖೆಗಳ ಮಧ್ಯೆ ಸಮನ್ವಯ ಬೇಕು. ಸಣ್ಣ ನೀರಾವರಿ, ಲೋಕೋಪಯೋಗಿ, ಜಲ ಸಂಪನ್ಮೂಲ, ಪಂಚಾಯತ್ ರಾಜ್ ಇಲಾಖೆಗಳ ಹಣವನ್ನು ಕ್ರೋಡೀಕರಿಸಿ ಯಾವ ಕಾಮಗಾರಿಗೆ ಮೊದಲ ಆದ್ಯತೆ ನೀಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿಗಳು, ಸಚಿವರು ನಿರ್ಧಾರ ಕೈಗೊಂಡು ಯೋಜನಾ ಬದ್ಧವಾಗಿ ಕೆಲಸ ಮಾಡಬೇಕು~ ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.