ಸೋಮವಾರ, ಜೂನ್ 21, 2021
30 °C
ಬೆಂಗಳೂರು ಉತ್ತರ: ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆಗೆ 8 ನಾಮಪತ್ರ

ಕೃಷ್ಣ ಬೈರೇಗೌಡ ಸ್ಪರ್ಧೆ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ವಿನೂತನವಾಗಿ ಆರಂಭಿಸಿರುವ ಅಭ್ಯರ್ಥಿ ಆಯ್ಕೆಯ ಪ್ರಾಯೋಗಿಕ ಚುನಾವಣೆಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಎಂಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮೂರು ನಾಮಪತ್ರಗಳು ತಿರಸ್ಕೃತವಾಗಿವೆ.ಈ ಕ್ಷೇತ್ರದಿಂದ ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ಕಣಕ್ಕಿಳಿಸಬೇಕು ಎಂದು ಕಾಂಗ್ರೆಸ್‌ ರಾಜ್ಯ ನಾಯಕರು ಬಯಸಿದ್ದರು. ಆದರೆ ಅವರು ಅಭ್ಯರ್ಥಿ ಆಯ್ಕೆ ಚುನಾವಣೆಗೆ ನಾಮಪತ್ರ ಸಲ್ಲಿಸಿಲ್ಲ. ಹಾಗಾಗಿ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂಬುದು ಖಚಿತವಾಗಿದೆ.ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಕೆಪಿಸಿಸಿ ಕಾರ್ಯದರ್ಶಿ ಜಿ.ಸಿ.ಚಂದ್ರಶೇಖರ್, ಎಐಸಿಸಿ ವಕ್ತಾರ ಎಂ.ವಿ.ರಾಜೀವ್‌ ಗೌಡ ಮತ್ತು ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಈಗ ಕಣದಲ್ಲಿರುವ ಪ್ರಮುಖರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.