ಭಾನುವಾರ, ಏಪ್ರಿಲ್ 18, 2021
32 °C

ಕೃಷ್ಣ ಮಾರ್ಗದರ್ಶನದಲ್ಲಿ ಚುನಾವಣೆ- ಪರಮೇಶ್ವರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ರಾಜಕೀಯ ನೈಪುಣ್ಯತೆ ಹೊಂದಿರುವ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರ ಮಾರ್ಗದರ್ಶನದಲ್ಲಿಯೇ ಮುಂಬರುವ ವಿಧಾನಸಭಾ ಚುನಾವಣೆ ಎದುರಿಸಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಮಂಗಳವಾರ ಇಲ್ಲಿ ತಿಳಿಸಿದರು.ನಗರದ ಸಿದ್ಧಾರ್ಥ ಕಾಲೇಜಿನ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು `ಪ್ರಜಾವಾಣಿ~ಗೆ ಪ್ರತಿಕ್ರಿಯಿಸಿ, ಎಸ್.ಎಂ.ಕೃಷ್ಣ, ಮರಳಿ ರಾಜ್ಯ ರಾಜಕಾರಣದತ್ತ ಮುಖ ಮಾಡಿರುವುದು, ರಾಜ್ಯ ಕಾಂಗ್ರೆಸ್‌ಗೆ ಹೊಸ ಚೈತನ್ಯ ತುಂಬಿದಂತಾಗಿದೆ ಎಂದು ಬಣ್ಣಿಸಿದರು. 1999ರ ವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದ ಎಸ್.ಎಂ.ಕೃಷ್ಣ ಅವರ ಕಾರ್ಯಶೈಲಿಯನ್ನೇ ರಾಜ್ಯದ ಜನತೆ ಬಯಸುತ್ತಿದ್ದಾರೆ. ಕೃಷ್ಣ ಅವರನ್ನು ಬಳಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸದಾಸಿದ್ಧವಾಗಿದೆ ಎಂದರು.ಅಧ್ಯಕ್ಷ ಸ್ಥಾನ ಬದಲಾವಣೆಗಳ ಮುನ್ಸೂಚನೆ ಕುರಿತು ಕೇಳಿದ್ದಕ್ಕೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟದ್ದು. ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಪರಮೇಶ್ವರ್ ಹೇಳಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.