ಶನಿವಾರ, ಮೇ 15, 2021
22 °C

ಕೆಂಭಾವಿಯಲ್ಲಿ ಮಳೆ: ಮನೆಗಳಿಗೆ ನುಗ್ಗಿದ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಂಭಾವಿ: ಪಟ್ಟಣದಲ್ಲಿ ಗುರುವಾರ ಸುರಿದ ಧಾರಾಕಾರ ಮಳೆಗೆ ಹಳೆ ಬಸ್ ನಿಲ್ದಾಣ ಪ್ರದೇಶದ ಅನೇಕ ಮನೆಗಳಿಗೆ ನೀರು ನುಗ್ಗಿದ್ದು, ಬಡಾವಣೆಯ ಜನ ಮಳೆ ನೀರು ಹೊರಹಾಕಲು ಪರದಾಡುವಂತಾಗಿದೆ.ಮನೆಯಲ್ಲಿದ್ದ ದವಸ ಧಾನ್ಯಗಳು ಹಾಗೂ ದಿನಬಳಕೆ ವಸ್ತುಗಳು ನೀರು ಪಾಲಾಗಿದ್ದು, ಬಡ ಕುಟುಂಬಗಳು ತೊಂದರೆ ಅನುಭವಿಸುವಂತಾಗಿದೆ. ಮನೆಗೆ ನೀರು ನುಗ್ಗಿದ್ದು, ನೀರು ಹೊರಹಾಕಲು ಮಹಿಳೆಯರು ಹರಸಾಹಸ ಮಾಡಬೇಕಾಯಿತು.ಬಡಾವಣೆಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮನೆಗಳಿಗೆ ನೀರು ನುಗ್ಗಿ ಹಾನಿ ಉಂಟಾಗಿದೆ. ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಮಾಡಿದ್ದರಿಂದ ಮಳೆ ಬಂದಾಗಲೆಲ್ಲ ಈ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗುತ್ತಿದೆ. ಇದಕ್ಕೆ ಅಧಿಕಾರಿಗಳೇ ನೇರ ಹೊಣೆ ಎಂದು ಕೆಜೆಪಿ ಮುಖಂಡ ಸಂಗಣ್ಣ ತುಂಬಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪಟ್ಣದಲ್ಲಿ ನಿರ್ಮಾಣವಾಗುತ್ತಿರುವ ರಾಜ ಕಾಲುವೆ ಕಾಮಗಾರಿಯು ಅವೈಜ್ಞಾನಿಕವಾಗಿದ್ದು, ವರ್ಷಗಳೇ ಗತಿಸಿದರೂ ಇನ್ನು ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದಾಗಿಯೂ ಹಲವಾರು ಬಡಾವಣೆಗಳಲ್ಲಿ ನೀರು ನುಗ್ಗುತ್ತಿದೆ. ಶೀಘ್ರ ಚರಂಡಿ ಕಾಮಗಾರಿ ಪೂರ್ಣಗೊಳಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.