ಕೆಂಭಾವಿ: ಕ್ರೀಡೆಯಲ್ಲಿ ಭಾಗವಹಿಸಲು ಕರೆ

7

ಕೆಂಭಾವಿ: ಕ್ರೀಡೆಯಲ್ಲಿ ಭಾಗವಹಿಸಲು ಕರೆ

Published:
Updated:

ಕೆಂಭಾವಿ: ಆಧುನಿಕ ಯುಗದಲ್ಲಿ ಮೊಬೈಲ್ ಹಾಗೂ ಟಿವಿಗಳಿಗೆ ಮಾರುಹೋದ ವಿದ್ಯಾರ್ಥಿಗಳು ಹೊರಾಂಗಣ ಕ್ರೀಡೆಗಳಿಂದ ದೂರ ಸರಿಯುತ್ತಿದ್ದಾರೆ. ಇದರಿಂದ ಮಕ್ಕಳಲ್ಲಿ ದೈಹಿಕ ಸಾಮರ್ಥ್ಯ ಕಡಿಮೆಯಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ದನಗೌಡ ಪೊಲೀಸ್ ಪಾಟೀಲ ಹೇಳಿದರು. ಸಮೀಪದ ಹದನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸುರಪುರ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದರು.ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ದೈಹಿಕ ಸಾಮರ್ಥ್ಯ ಹೆಚ್ಚುವುದರ ಜೊತೆಗೆ ಮಾನಸಿಕ ನೆಮ್ಮದಿ ಸಿಗುತ್ತದೆ. ಪಾಲಕರು ಕೂಡಾ ತಮ್ಮ ಮಕ್ಕಳನ್ನು ಇಂತಹ ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ಎಂದರು.ಜಿಲ್ಲಾ ಪಂಚಾಯತಿ ಅನುದಾನದಲ್ಲಿ ಶಾಲೆಯ ಕಂಪೌಂಡ್ ಗೋಡೆ ನಿರ್ಮಿಸಲು ರೂ. 4 ಲಕ್ಷ ನೀಡುವುದಾಗಿ ಭರವಸೆ ನೀಡಿದರು.

ಸಿ.ಡಿ ಪಾಟೀಲ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ವಿ ಕೆಂಪರಂಗಯ್ಯ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತಿ ಅಧ್ಯಕ್ಷ ಸಿದ್ದು ಕಣ್ಣಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ತಾಲ್ಲೂಕು ಪಂಚಾಯತಿ ಸದಸ್ಯೆ ಕೃಷ್ಣಮ್ಮ ಬಡಿಗೇರ, ಎಪಿಎಂಸಿ ಸದಸ್ಯ ಮಲ್ಲಣ್ಣ ಹೆಗ್ಗೇರಿ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಬಿ.ಆರ್. ಪಾಟೀಲ, ಚಂದ್ರಕಾಂತ ಕೊಣ್ಣೂರ, ನಳಿನಿಬಾಯಿ, ಬಸಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry