ಗುರುವಾರ , ಮೇ 13, 2021
24 °C

ಕೆ.ಆರ್.ಮಾರ್ಕೆಟ್ ಹೂವು ಮಾರಾಟ ನಾಳೆ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆ.ಆರ್. ಮಾರುಕಟ್ಟೆಯಲ್ಲಿ ಕೋರ್ಟ್ ಆದೇಶ ಉಲ್ಲಂಘಿಸಿ ಅಂಗಡಿಗಳ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿರುವುದನ್ನು ವಿರೋಧಿಸಿ ನಗರದ ಹೂ ಮಾರಾಟಗಾರರ ಸಂಘಟನೆ ವತಿಯಿಂದ 16ರಂದು ಕೆ.ಆರ್. ಫ್ಲವರ್ ಮಾರ್ಕೆಟ್ ಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ.`ಮಾರುಕಟ್ಟೆ ಸಂಕೀರ್ಣದಲ್ಲಿ ಪ್ಯಾಸೇಜ್‌ಗಳಲ್ಲಿ ಮಳಿಗೆ ಕಟ್ಟದಂತೆ ನ್ಯಾಯಾಲಯ ನಿರ್ದೇಶನ ನೀಡಿದೆ. ಆದರೆ ನ್ಯಾಯಾಲಯದ ಆದೇಶಗಳನ್ನು ಪಾಲಿಸದ ಬಿಬಿಎಂಪಿ ಆಯುಕ್ತ ಎಂ.ಕೆ. ಶಂಕರಲಿಂಗೇಗೌಡ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಸರ್ಕಾರಿ ಆಸ್ತಿ ಒತ್ತುವರಿ ತೆರವಿಗೆ ಬಿಬಿಎಂಪಿ ಆಯುಕ್ತರು ಕೂಡಲೇ ಕ್ರಮ ಕೈಗೊಳ್ಳಬೇಕು~ ಎಂದು ಸಂಘದ ಅಧ್ಯಕ್ಷ ರಘುಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ. 

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.