ಭಾನುವಾರ, ಏಪ್ರಿಲ್ 18, 2021
33 °C

ಕೆಆರ್‌ಎಸ್: ಒಳ ಹರಿವು ಇಳಿಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಂಗಪಟ್ಟಣ: ತಾಲ್ಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಆ.8ರಂದು 31,662 ಕ್ಯೂಸೆಕ್ ಇದ್ದ ಒಳ ಹರಿವಿನ ಪ್ರಮಾಣ ಮಂಗಳವಾರದ ವೇಳೆಗೆ 13,210 ಕ್ಯೂಸೆಕ್‌ಗೆ ಇಳಿದಿದೆ. ಆ.9ರಂದು ಒಂದೇ ದಿನ 3 ಅಡಿಗಳಷ್ಟು ನೀರು ಜಲಾಶಯಕ್ಕೆ ಹರಿದು ಬಂದಿತ್ತು. ಆದರೆ ಕಳೆದ ಮೂರು ದಿನಗಳಲ್ಲಿ ಕೇವಲ 2.5 ಅಡಿಗಳಷ್ಟು ಮಾತ್ರ ನೀರು ಹರಿದು ಬಂದಿದೆ. ಜಲಾಶಯದಿಂದ 350 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.   ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 123.85 ಅಡಿ ನೀರು ಸಂಗ್ರಹವಾಗಿತ್ತು. 13,774 ಕ್ಯೂಸೆಕ್ ಒಳ ಹರಿವು ಹಾಗೂ 8,512 ಕ್ಯೂಸೆಕ್ ಹೊರ ಹರಿವು ಇತ್ತು.ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಒಂದು ಬೆಳೆ ಬೆಳೆಯಲು 65 ಟಿಎಂಸಿ ನೀರಿನ ಅಗತ್ಯವಿದೆ. ಆದರೆ ಜಲಾಶ ಯದಲ್ಲಿ ಸದ್ಯ 15 ಟಿಎಂಸಿ ಮಾತ್ರ ನೀರು ಇದೆ. ಮುಂಗಾರು ಹಂಗಾಮು ಬೆಳೆಗೆ ಈಗಿರುವ ನೀರು ಸಾಲುವುದಿಲ್ಲ ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ವಿಜಯಕುಮಾರ್ ಹೇಳುತ್ತಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.