ಸೋಮವಾರ, ಮಾರ್ಚ್ 8, 2021
30 °C

ಕೆಆರ್‌ಎಸ್ 100 ಅಡಿ ಭರ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಆರ್‌ಎಸ್ 100 ಅಡಿ ಭರ್ತಿ

ಶ್ರೀರಂಗಪಟ್ಟಣ: ತಾಲ್ಲೂಕಿನ ಕೃಷ್ಣರಾಜ ಸಾಗರ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣ ಏರಿಕೆಯಾಗುತ್ತಿದ್ದು, ಬುಧವಾರ ಸಂಜೆ ವೇಳೆಗೆ 13,481 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬಂರುತ್ತಿದೆ.ಸೋಮವಾರ 9,831 ಕ್ಯೂಸೆಕ್, ಮಂಗಳವಾರ ಬೆಳಿಗ್ಗೆ 12,200 ಸಾವಿರ ಕ್ಯೂಸೆಕ್ ಇದ್ದ ಒಳ ಹರಿವಿನ ಪ್ರಮಾಣ ಬುಧವಾರ 13 ಸಾವಿರ ಕ್ಯೂಸೆಕ್ ಗಡಿ ದಾಟಿದೆ. 124.80 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಬುಧವಾರ 100.33 ಅಡಿ ನೀರು ಸಂಗ್ರಹವಾಗಿದೆ. ಮಂಗಳವಾರ 99.80 ಅಡಿಗಳಷ್ಟು ನೀರು ಇತ್ತು ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.ಜಲಾಶಯದಿಂದ ನಾಲೆಗಳಿಗೆ ಹರಿಸುತ್ತಿದ್ದ ನೀರಿನ ಪ್ರಮಾಣವನ್ನು ತಗ್ಗಿಸಲಾಗಿದೆ. ಸೋಮವಾರ 6,868 ಕ್ಯೂಸೆಕ್, ಮಂಗಳವಾರ 4,875 ಹಾಗೂ ಬುಧವಾರ 4378 ಕ್ಯೂಸೆಕ್‌ಗೆ ಇಳಿಕೆಯಾಗಿದೆ. 2010ರ ಇದೇ ದಿನ ಜಲಾಶಯದಲ್ಲಿ 83.78 ಅಡಿ ನೀರು ಸಂಗ್ರಹವಾಗಿತ್ತು. 3,145 ಕ್ಯೂಸೆಕ್ ಒಳ ಹರಿವು ಹಾಗೂ 4,378 ಕ್ಯೂಸೆಕ್ ಹೊರ ಹರಿವು ಇತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.