ಗುರುವಾರ , ಜೂನ್ 24, 2021
28 °C

ಕೆ.ಆರ್‌. ನಗರ ಯೋಧ ಉಗ್ರರ ಗುಂಡಿಗೆ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆ.ಆರ್. ನಗರ: ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲ್ಲೂಕಿನ ಬಡಕನಕೊಪ್ಪಲು ನಿವಾಸಿ ಕಾಂತರಾಜು ಮತ್ತು ಧನಲಕ್ಷ್ಮೀ ಅವರ ಪುತ್ರ ಯೋಧ ಸುನೀಲ್ (22) ಜಮ್ಮು–ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಸುನೀಲ್ ಮೂರು ವರ್ಷಗಳ ಹಿಂದೆ ಸೇನೆ ಸೇರಿದ್ದರು.ಅವರಿಗೆ ಇಬ್ಬರು ಸಹೋದರಿಯರು ಮತ್ತು ಸಹೋದರ ಇದ್ದಾರೆ. ಯೋಧ ಸುನೀಲ್ ಕಳೇಬರವನ್ನು ವಿಮಾನದ ಮೂಲಕ ಬೆಂಗಳೂರು ಮಾರ್ಗವಾಗಿ ಸ್ವಗ್ರಾಮಕ್ಕೆ ತರಲಾಗುವುದು ಎಂದು ಸೇನಾ ಕಚೇರಿಯ ಸಿಬ್ಬಂದಿ ದೂರವಾಣಿ ಮೂಲಕ ಕುಟುಂಬದ ಸದಸ್ಯರಿಗೆ ತಿಳಿಸಿದ್ದಾರೆ.ಆದರೆ, ತೀವ್ರ ಹಿಮಪಾತದ ಕಾರಣ ವಿಮಾನ ಸಂಚಾರ ರದ್ದುಗೊಂಡಿ­ರುವುದರಿಂದ ಮೃತದೇಹ ತರುವಲ್ಲಿ ವಿಳಂಬವಾಗುವ ಸಾಧ್ಯತೆ ಇದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.