ಬುಧವಾರ, ಮೇ 18, 2022
24 °C

ಕೆ.ಎಂ.ರಸ್ತೆ ಕಾಮಗಾರಿ ಶೀಘ್ರ ಆರಂಭ: ಸಿ.ಟಿ.ರವಿ.ರೂ 20 ಕೋಟಿ ವೆಚ್ಚದಲ್ಲಿ ಡಾಂಬರೀಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಬಿಸಲೇಹಳ್ಳಿ ಗೇಟ್‌ನಿಂದ ಮತ್ತಾವರದವರೆಗೂ 40 ಕಿಮೀ ರಸ್ತೆಯನ್ನು 20 ಕೋಟಿ ರೂ ವೆಚ್ಚದಲ್ಲಿ ಡಾಂಬರೀಕರಣ ಮಾಡಲಾಗುವುದು ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು.

ನಗರದ ದಂಟರಮಕ್ಕಿ ಕೆರೆ ಏರಿಯ ಡಾಂಬರೀಕರಣ ಕಾಮಗಾರಿಯನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.20 ಕೋಟಿ ರೂ ವೆಚ್ಚದಲ್ಲಿ ಕೆ.ಎಂ.ರಸ್ತೆ ಡಾಂಬರೀಕರಣ ಕಾರ್ಯಕ್ಕೆ ಏಪ್ರಿಲ್‌ನಲ್ಲಿ ಚಾಲನೆ ದೊರೆಯಲಿದೆ.2012 ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ರಸ್ತೆಯನ್ನು ಚತುಷ್ಪಥ ಹೆದ್ದಾರಿ ದರ್ಜೆಗೆ ಏರಿಸಲು ಮತ್ತಾವರ ಅರಣ್ಯ ಮಾಹಿತಿ ಕೇಂದ್ರದಿಂದ ಕಡೂರಿನವರೆಗೂ ಡಿಪಿಆರ್ ಸರ್ವೆ ಕಾರ್ಯಕ್ಕೆ 49.5 ಲಕ್ಷ ಮಂಜೂರಾಗಿದೆ ಎಂದು ಅವರು ನುಡಿದರು.ಬೆಂಗಳೂರಿನ ಸಿಎಸ್ ನಿರ್ಮಾಣ ಸಂಸ್ಥೆಯವರು ಸಮೀಕ್ಷೆ ಮಾಡುತ್ತಿದ್ದು, 2 ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ಅವರು ಹೇಳಿದರು.ನಗರದ ಹನುಮಂತಪ್ಪ ವೃತ್ತದಿಂದ ಕತ್ರಿಮಾರಮ್ಮ ದೇವಸ್ಥಾನದವರೆಗಿನ ರಸ್ತೆಯನ್ನು 2 ಕೋಟಿ ರೂ ವೆಚ್ಚದಲ್ಲಿ ಡಾಂಬರೀಕರಣ ಮತ್ತು ಎರಡೂ ಬದಿ ಚರಂಡಿ ನಿರ್ಮಾಣ ಮಾಡುವ ಕಾರ್ಯಕ್ಕೆ ಟೆಂಡರ್ ಪ್ರಕ್ರಿಯೆ ಮುಗಿದಿದೆ, ಜೂನ್ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅವರು ನುಡಿದರು.ನಗರಸಭೆ ಅಧ್ಯಕ್ಷ ಕೆ.ಶ್ರೀನಿವಾಸ್, ಸಿಡಿಎ ಮಾಜಿ ಅಧ್ಯಕ್ಷ ರಂಗನಾಥ್, ತಾಪಂ ಸದಸ್ಯ ಪುಟ್ಟೇಗೌಡ, ನಗರಸಭೆ ಸದಸ್ಯರಾದ ಪುಷ್ಪರಾಜ್, ನಿಂಗೇಗೌಡ, ಮಧುಕುಮಾರ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಾದೇಗೌಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.