ಕೆಎಎಸ್ ಅಧಿಕಾರಿಗಳ ವರ್ಗಾವಣೆ

7

ಕೆಎಎಸ್ ಅಧಿಕಾರಿಗಳ ವರ್ಗಾವಣೆ

Published:
Updated:

ಬೆಂಗಳೂರು: ರಾಜ್ಯ ಸರ್ಕಾರ ಈ ಕೆಳಕಂಡ ಕೆಎಎಸ್ ಅಧಿಕಾರಿಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಸ್ಥಾನಗಳಿಗೆ ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.ವಿ.ಅಶೋಕ್- ರಿಜಿಸ್ಟ್ರಾರ್, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ, ಬೆಂಗಳೂರು. ಎಚ್.ವಿ.ಆತ್ಮರಾಮಯ್ಯ- ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಆಯುಕ್ತರ ಕಚೇರಿ, ಬೆಂಗಳೂರು. ಎಂ.ತಿಮ್ಮಪ್ಪ- ಯೋಜನಾ ನಿರ್ದೇಶಕರು, ಡಿಆರ್‌ಡಿಎ ಕೋಶ, ಬಾಗಲಕೋಟೆ ಜಿಲ್ಲಾ ಪಂಚಾಯಿತಿ. ಎನ್.ಚಂದ್ರಶೇಖರ್- ವಿಶೇಷ ಭೂಸ್ವಾಧೀನ ಅಧಿಕಾರಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ. ಆರ್.ಅಲ್ಲಪ್ಪ ಅವರ ವರ್ಗಾವಣೆ ಆದೇಶವನ್ನು ರದ್ದುಪಡಿಸಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪತ್ರಾಂಕಿತ ಸಹಾಯಕರ ಹುದ್ದೆಯಲ್ಲಿ ಮುಂದುವರಿಸಲಾಗಿದೆ. ಜಹೀರಾ ನಸೀಂ ಅವರ ವರ್ಗಾವಣೆ ಆದೇಶವನ್ನು ಮಾರ್ಪಡಿಸಿ ಯಾದಗಿರಿಯ ಹೆಚ್ಚುವರಿ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.ಕೆ.ವಿದ್ಯಾಕುಮಾರಿ ಅವರ ವರ್ಗಾವಣೆ ಆದೇಶವನ್ನು ಮಾರ್ಪಡಿಸಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ನೇಮಿಸಲಾಗಿದೆ. ಕೆ.ಎಂ.ವನಜಾಕ್ಷಿ ಅವರ ಆದೇಶವನ್ನು ಮಾರ್ಪಡಿಸಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಆಡಳಿತಾಧಿಕಾರಿನ್ನಾಗಿ ನೇಮಕ ಮಾಡಲಾಗಿದೆ.

 

ಎಂ.ಪ್ರಭಾವತಿ ವರ್ಗಾವಣೆ ರದ್ದುಪಡಿಸಿ ಹಾಲಿ ಇರುವ ಬೆಂಗಳೂರು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮುಖ್ಯ ಆಡಳಿತಾಧಿಕಾರಿ ಹುದ್ದೆಯಲ್ಲಿಯೇ ಮುಂದುವರಿಸಲಾಗಿದೆ. ಎಸ್. ರಾಜಾರಾಂ ಅವರ ವರ್ಗಾವಣೆ ಆದೇಶ ರದ್ದಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

 

ಡಿ.ಮಲ್ಲು ಅವರ ವರ್ಗಾವಣೆ ಆದೇಶವನ್ನು ಮಾರ್ಪಡಿಸಿ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಎಸ್.ಜಿ.ವಾಲಿ ಅವರ ಆದೇಶ ಮಾರ್ಪಡಿಸಿ ಗುಲ್ಬರ್ಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry