ಶುಕ್ರವಾರ, ಮೇ 14, 2021
27 °C

ಕೆಎಎಸ್ ಪರೀಕ್ಷೆ ಮುಂದೂಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೇಂದ್ರ ಲೋಕಸೇವಾ ಆಯೋಗವು ಇದೇ ಏಪ್ರಿಲ್ 10ರಿಂದ 27ರ ವರೆಗೆ ಐಎಎಸ್ ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆಯಾದ ಕರ್ನಾಟಕದ ಅಭ್ಯರ್ಥಿಗಳಿಗೆ ಸಂದರ್ಶನವನ್ನು ದೆಹಲಿಯಲ್ಲಿ ಹಮ್ಮಿಕೊಂಡಿದೆ.ಈ ವರ್ಷ ಕರ್ನಾಟಕದ ಸುಮಾರು 200 ಮಂದಿ ತೇರ್ಗಡೆಯಾಗಿದ್ದಾರೆ. ಇದೇ ಅವಧಿಯಲ್ಲಿ ಅವರಲ್ಲಿ ಕೆಲವರು ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆಯಬೇಕಾಗಿದೆ. ಏಕಕಾಲದಲ್ಲಿ ಎರಡೂ ಪರೀಕ್ಷೆಗಳಿಗೆ ಹಾಜರಾಗುವುದು ಸಾಧ್ಯವಿಲ್ಲ. ಯಾವುದಾದರೂ ಒಂದು ಪರೀಕ್ಷೆಯನ್ನಷ್ಟೇ ನಂಬಿಕೊಳ್ಳುವಂತಿಲ್ಲ. ಐಎಎಸ್ ಪರೀಕ್ಷೆಯಲ್ಲಿ ವಿಫಲರಾದರೂ ಕೆಎಎಸ್‌ನಲ್ಲಿ ಯಶಸ್ವಿ ಆಗಬಹುದು ಎಂಬ ಆಶಾಭಾವನೆ ಅನೇಕರಲ್ಲಿದೆ. ಈ ವರ್ಷ ಅಂತಿಮ ಪದವಿ ತರಗತಿಯಲ್ಲಿ ಓದುವ ವಿದ್ಯಾರ್ಥಿಗಳಿಗೆ ಕೆಎಎಸ್ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ.ರಾಜ್ಯದ ವಿವಿಧ ವಿವಿಗಳ ಪದವಿ ಪರೀಕ್ಷೆಗಳು ಏಪ್ರಿಲ್-ಮೇ ತಿಂಗಳಲ್ಲಿ ನಡೆಯುತ್ತವೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಮೂರೂ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಪರೀಕ್ಷಾ ದಿನಾಂಕಗಳ ನಡುವೆ ಅಂತರ ಇರುವಂತೆ ನೋಡಿಕೊಳ್ಳುವ ಅಗತ್ಯವಿದೆ. ಸಂಬಂಧಪಟ್ಟವರು ಈ ಕುರಿತು ಕ್ರಮ ತೆಗೆದುಕೊಳ್ಳಬೇಕು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.