ಕೆಎಎಸ್ ಪರೀಕ್ಷೆ: 12ಕ್ಕೆ ವಿಚಾರಣೆ ಮುಂದೂಡಿಕೆ

7

ಕೆಎಎಸ್ ಪರೀಕ್ಷೆ: 12ಕ್ಕೆ ವಿಚಾರಣೆ ಮುಂದೂಡಿಕೆ

Published:
Updated:

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇದೇ 15ರಿಂದ ಜನವರಿ 6ರವರೆಗೆ ನಡೆಸಲು ಉದ್ದೇಶಿಸಿರುವ ಕೆಎಎಸ್ ಮುಖ್ಯ ಪರೀಕ್ಷೆಗಳನ್ನು ಮುಂದೂಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.ಶುಕ್ರವಾರ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಚ್. ಸುಬ್ರಹ್ಮಣ್ಯ ಜೋಯಿಸ್, `ಕೆಪಿಎಸ್‌ಸಿ ಮುಖ್ಯ ಪರೀಕ್ಷೆ ನಡೆಸಲು ಉದ್ದೇಶಿಸಿರುವ ಅವಧಿಯಲ್ಲೇ ವಲಯ ಅರಣ್ಯಾಧಿಕಾರಿಗಳು ಹಾಗೂ ರಾ ಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ನಡೆಯಲಿದೆ. ಹಾಗಾಗಿ ಕೆಪಿಎಸ್‌ಸಿಪರೀಕ್ಷೆಗಳನ್ನು ಮುಂದೂಡಬೇಕು' ಎಂದು ಮನವಿ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry