ಬೆಂಗಳೂರು: ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಗೆ ಯಾವುದೇ ರೀತಿಯ ವಸತಿ ಸೌಲಭ್ಯ ನೀಡದೆ ಸಂಸ್ಥೆಯ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಚಾಲಕರ ಕ್ಷೇಮಾಭಿವೃದ್ಧಿ ಸೇವಾ ಸಂಘ ಮತ್ತು ಮಯೂರ ವರ್ಮ ಕಲಾ ಸಾಂಸ್ಕೃತಿಕ ಕನ್ನಡ ಸಂಘ ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಜೆ.ಎಂ. ವೆಂಕಟೇಶ್, ಬೇರೆ ಸ್ಥಳಗಳಿಂದ ಬಂದು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಚಾಲಕರು ಹಾಗೂ ನಿರ್ವಾಹಕರು ವಸತಿ ಸೌಲಭ್ಯವಿಲ್ಲದೆ ಇಡೀ ರಾತ್ರಿ ಬಸ್ಸುಗಳಲ್ಲೇ ಕಳೆಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಂಸ್ಥೆ ಲಾಭದಲ್ಲಿದ್ದರೂ ಸಿಬ್ಬಂದಿಗಳಿಗೆ ಮೂಲ ಸೌಕರ್ಯಗಳನ್ನು ನೀಡಲು ಆಡಳಿತ ಮಂಡಳಿ ಮುಂದಾಗುತ್ತಿಲ್ಲ. ಇದರಿಂದ ಸಂಸ್ಥೆಯ ಸಿಬ್ಬಂದಿ ತಮ್ಮ ಕುಟುಂಬಗಳಿಂದ ದೂರ ಉಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಸಾರಿಗೆ ಸಂಸ್ಥೆಯ ಅಧಿಕಾರಿಗಳ ಸರ್ಕಾರಿ ವಾಹನಗಳಿಗೆ ಮೊದಲು ಜಿಪಿಎಸ್ ಅಳವಡಿಸಬೇಕು. ಇದರಿಂದ ಸರ್ಕಾರಿ ವಾಹನಗಳ ದುರುಪಯೋಗ ನಿಲ್ಲುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಮಾನ್ಯ ಸಾರಿಗೆಯಿಂದ ಸಂಸ್ಥೆಗೆ ಲಾಭವಾಗುತ್ತಿದ್ದು, ವೋಲ್ವೋ ಬಸ್ಸುಗಳಿಂದ ನಷ್ಟವಾಗುತ್ತಿದೆ. ಈ ನಷ್ಟದ ಹೊರೆ ಸಾಮಾನ್ಯ ಜನರ ಮೇಲೆ ಬೀಳುತ್ತಿದೆ. ಹೀಗಾಗಿ ಸಾರಿಗೆ ಸಚಿವರು ಇತ್ತ ಗಮನ ಹರಿಸಬೇಕು ಎಂದು ಕಾರ್ಯದರ್ಶಿ ಎನ್.ಮುನಿರಾಜು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.