ಬುಧವಾರ, ನವೆಂಬರ್ 13, 2019
21 °C
ಪ್ರಚೋದನಾಕಾರಿ ಭಾಷಣ

ಕೆ.ಎಸ್ ಈಶ್ವರಪ್ಪಗೆ ನಿರೀಕ್ಷಣಾ ಜಾಮೀನು

Published:
Updated:

ಶಿವಮೊಗ್ಗ: ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ. ಶಿವ ಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಎಸ್. ಈಶ್ವ ರಪ್ಪ ಅವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಏ. 9ರಂದು ಇಲ್ಲಿಯ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ವಿಪ್ರ ವೇದಿಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈಶ್ವರಪ್ಪ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದರು ಎಂದು ಆರೋಪಿಸಿ ಚುನಾವಣಾ ಅಧಿಕಾರಿ ಜನಾರ್ದನ್ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಈ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮೊಕದ್ದಮೆ ದಾಖಲಾದ ಕಾರಣ ಈಶ್ವರಪ್ಪ ನಿರೀಕ್ಷಣಾ ಜಾಮೀನು ಕೋರಿದ್ದರು.ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಆರ್.ಎಂ. ಶೆಟ್ಟರ್ ಅವರು 25 ಸಾವಿರ ರೂಪಾಯಿ ಬಾಂಡ್ ಸಲ್ಲಿಸುವಂತೆ ಸೂಚಿಸಿ ಈಶ್ವರಪ್ಪ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ ಎಂದು ಈಶ್ವರಪ್ಪ ಪರ ವಕೀಲ ಅಶೋಕ್ ಭಟ್ `ಪ್ರಜಾವಾಣಿ'ಗೆ ತಿಳಿಸಿದರು.

ಪ್ರತಿಕ್ರಿಯಿಸಿ (+)