ಕೆಐಎಎಲ್ನಲ್ಲಿ ಸಾಂಸ್ಕೃತಿಕ ಸಡಗರ

ಬೆಂಗಳೂರು: ಸಂಕ್ರಾಂತಿ ಹಬ್ಬದ ಅಂಗವಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಎಲ್) ಹಮ್ಮಿಕೊಳ್ಳಲಾಗಿದ್ದ ಮೂರು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮ ಭಾನುವಾರ ಮುಕ್ತಾಯವಾಯಿತು.
ಉತ್ಸವದ ಅಂಗವಾಗಿ ವಿಮಾನ ನಿಲ್ದಾಣವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಕಲಾವಿದೆ ಕೃಪಾ ರಾಮಚಂದ್ರನ್ ಹಾಗೂ ತಂಡದವರು ಪ್ರದರ್ಶಿಸಿದ ಭರತನಾಟ್ಯ ಆಕರ್ಷಕವಾಗಿತ್ತು. ವಿವೇಕಾನಂದ ಕಲಾ ಕೇಂದ್ರ ಹಾಗೂ ತಂಡದವರು ಪ್ರದರ್ಶಿಸಿದ ನೃತ್ಯ ಗಮನ ಸೆಳೆಯಿತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.