ಕೆಜಿಪಿಯತ್ತ ನಟ, ನಟಿಯರು

7

ಕೆಜಿಪಿಯತ್ತ ನಟ, ನಟಿಯರು

Published:
Updated:

ಬೆಂಗಳೂರು: ಕನ್ನಡದ ಪ್ರಮುಖ ಚಿತ್ರ ನಟ-ನಟಿಯರು ಕೆಜೆಪಿಯತ್ತ ಒಲವು ತೋರುತ್ತಿದ್ದಾರೆ. ಭಾನುವಾರ ಹಾವೇರಿಯಲ್ಲಿ ನಡೆಯುವ ಸಮಾವೇಶದಲ್ಲಿ ಶ್ರುತಿ, ದೊಡ್ಡಣ್ಣ ಅವರು ಕೆಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ನಟಿ ಪೂಜಾ ಗಾಂಧಿ ಶುಕ್ರವಾರವಷ್ಟೇ ಜೆಡಿಎಸ್ ತೊರೆದು ಕೆಜೆಪಿ ಸೇರಿದ್ದರು. ಇನ್ನೂ ಕೆಲವರು ಕೆಜೆಪಿ ಸೇರಲಿದ್ದಾರೆ ಎಂದು ಮೂಲಗಳಿಂದ ಗೊತ್ತಾಗಿದೆ.ರಕ್ಷಿತಾ ಹೇಳಿಕೆ: ಬಿಎಸ್‌ಆರ್ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಅವರನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಈ ಬಗ್ಗೆ `ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಅವರು, `ನಾನು ಬಿಎಸ್‌ಆರ್ ಕಾಂಗ್ರೆಸ್ ತೊರೆಯುವ ಪ್ರಶ್ನೆಯೇ ಇಲ್ಲ. ಈಗಲೂ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದೇನೆ' ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry