ನವದೆಹಲಿ (ಪಿಟಿಐ): ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ನಿವೃತ್ತ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ವರ್ಮಾ ಅವರನ್ನು ರಾಷ್ಟ್ರೀಯ ಮಾನವ ಹಕ್ಕು ಆಯೋಗದ (ಎನ್ಎಚ್ಆರ್ಸಿ) ಅಧ್ಯಕ್ಷರನ್ನಾಗಿ ಮುಂದುವರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎನ್ಎಚ್ಆರ್ಸಿಯ ಅಧ್ಯಕ್ಷಗಿರಿಗೆ ಭ್ರಷ್ಟಾಚಾರದ ಆರೋಪ ಹೊತ್ತಿದ್ದ ವೈ.ಕೆ.ಸಬರ್ವಾಲ್ ಅವರು ಸೂಕ್ತರಲ್ಲ ಎಂದು ತೀರ್ಮಾನಿಸಲಾಗಿತ್ತು. ಆದರೆ ಈಗ ಅಷ್ಟೇ ಗಂಭೀರ ಆರೋಪ ಎದುರಿಸುತ್ತಿರುವ ಬಾಲಕೃಷ್ಣನ್ ಈ ಸ್ಥಾನ ನಿರ್ವಹಿಸುತ್ತಿದ್ದಾರೆ ಎಂದು ವರ್ಮಾ ಸಮಾರಂಭವೊಂದರಲ್ಲಿ ವ್ಯಂಗ್ಯವಾಡಿದರು.

ಇಬ್ಬರೂ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಸಂದರ್ಭದಲ್ಲಿ ಅವರ ಸಂಬಂಧಿಕರು ಮತ್ತು ಮಕ್ಕಳು ಅಕ್ರಮ ಆಸ್ತಿ ಸಂಪಾದಿಸಿರುವ ಏಕರೂಪವಾದ ಆರೋಪ ಎದುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ದಾಖಲೆಗಳಿದ್ದರೂ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಅವರು ಪ್ರಶ್ನಿಸಿದರು. ಈ ಇಬ್ಬರು ಮಾಜಿ ನ್ಯಾಯಮೂರ್ತಿಗಳ ಮೇಲಿನ ಭ್ರಷ್ಟಾಚಾರದ ಆರೋಪ ಇಡೀ ನ್ಯಾಯಾಂಗದ ವ್ಯವಸ್ಥೆಯನ್ನು ಜನತೆ ಅನುಮಾನದ ದೃಷ್ಟಿಯಿಂದ ನೋಡುವಂತಹ ಪರಿಸ್ಥಿತಿ ನಿರ್ಮಿಸಿದೆ. ಆರೋಪ ಎದುರಿಸುತ್ತಿರುವವರ ವಿಚಾರಣೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡದಿದ್ದರೆ ಇಡೀ ವ್ಯವಸ್ಥೆಯನ್ನೇ ಪ್ರಶ್ನಿಸಬೇಕಾಗುತ್ತದೆ ಎಂದು ಗುಡುಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.