ಶುಕ್ರವಾರ, ಮೇ 20, 2022
19 °C

ಕೆ.ಜಿ.ಮಹೇಶ್ವರಪ್ಪ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಹಿರಿಯ ಸಮಾಜವಾದಿ, ಮಾಜಿ ಶಾಸಕ ಕುರ್ಕಿ ಗೌಡ್ರ ಮಹೇಶ್ವರಪ್ಪ (84) ಸೋಮವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಎಂಟು ದಿನಗಳ ಹಿಂದೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಮಹೇಶ್ವರಪ್ಪ ಅವರಿಗೆ ಪತ್ನಿ, ಪುತ್ರಿ ಇದ್ದಾರೆ.ಸಮಾಜವಾದಿ ರಾಮಮನೋಹರ ಲೋಹಿಯಾ ಅವರ ಸಿದ್ಧಾಂತಗಳಿಂದ ಆಕರ್ಷಿತರಾಗಿದ್ದ ಮಹೇಶ್ವರಪ್ಪ ಅವರು, ಶಾಂತವೇರಿ ಗೋಪಾಲಗೌಡರ ಗರಡಿಯಲ್ಲಿ ಪಳಗಿದವರು. ಮಾಜಿ ಮುಖ್ಯಮಂತ್ರಿಗಳಾಗಿದ್ದ ಜೆ.ಎಚ್. ಪಟೇಲ್ ಮತ್ತು ಎಸ್. ಬಂಗಾರಪ್ಪ ಅವರ ಆಪ್ತ ಒಡನಾಡಿಯಾಗಿದ್ದ ಮಹೇಶ್ವರಪ್ಪ  ಸಂಡೂರು ಭೂ ಹೋರಾಟದಲ್ಲಿ ಪ್ರಧಾನ ಪಾತ್ರ ವಹಿಸಿದ್ದರು.ಶಾಂತವೇರಿ, ಜೆ.ಎಚ್. ಪಟೇಲ್, ಎಸ್. ವೆಂಕಟರಾಮ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಸಮಾಜವಾದಿ ಪಕ್ಷ ಅಸ್ತಿತ್ವ ತಂದಿದ್ದರು.  1965ರಿಂದ 70ರ ತನಕ ಸೋಷಲಿಸ್ಟ್ ಪಕ್ಷದ ಅಧ್ಯಕ್ಷರಾಗಿದ್ದರು. ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಕ್ಷೇತ್ರದಿಂದ 1983ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ನಂತರ ರಾಜ್ಯಸಭಾ ಸದಸ್ಯರಾಗಿಯೂ (1986-92) ಆಯ್ಕೆಯಾಗಿದ್ದರು.ಅಂತ್ಯಕ್ರಿಯೆ: ಮಹೇಶ್ವರಪ್ಪ ಅವರ ಅಂತ್ಯಕ್ರಿಯೆ ಸ್ವಗ್ರಾಮ ಕುರ್ಕಿಯಲ್ಲಿ ಸೋಮವಾರ ಸಂಜೆ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.