ಸೋಮವಾರ, ಏಪ್ರಿಲ್ 19, 2021
32 °C

ಕೆಜೆಪಿಗೆ ಮಂತ್ರಿ, ಶಾಸಕರು ಬೇಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಬ್ಬಿ: `ನನ್ನ ಜತೆ ಸಚಿವ, ಶಾಸಕರು ಬರುವುದು ಬೇಡ. ಜನರಿದ್ದಾರೆ. ಅವರೇ ನನಗೆ ಶ್ರೀರಕ್ಷೆ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.



ಪಟ್ಟಣದಲ್ಲಿ ಭಾನುವಾರ ನಡೆದ ಸಾಗರನಹಳ್ಳಿ ರೇವಣ್ಣ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, `ಪ್ರಾದೇಶಿಕ ಪಕ್ಷ ಕಟ್ಟುವುದು ನಿಶ್ಚಿತ. ಡಿ.9ರಂದು ಬಿಜೆಪಿ ತೊರೆದು ಕೆಜಿಪಿ ಸೇರುತ್ತೇನೆ~ ಎಂದರು.



`ರಾಜಕೀಯವಾಗಿ ನನ್ನನ್ನು ಮುಗಿಸಲು ಬಿಜೆಪಿಯವರೇ ಷಡ್ಯಂತ್ರ ರೂಪಿಸಿದ್ದರು. ನನ್ನ ಕಣ್ಣೆದುರು ಪಕ್ಷದಲ್ಲಿ ಬೆಳೆದವರು ಕಾಲೆಳೆಯುವ ಕೆಲಸ ಮಾಡಿದರು. ಅವರಿಗೆಲ್ಲ ಮುಂಬರುವ ಚುನಾವಣೆಯಲ್ಲಿ ಪ್ರತ್ಯುತ್ತರ ನೀಡುತ್ತೇನೆ. ಪಕ್ಷದಲ್ಲೇ ಇರುವಂತೆ ಬಿಜೆಪಿ, ಆರ್‌ಎಸ್‌ಎಸ್ ಒತ್ತಡಕ್ಕೆ ಮಣಿಯುವುದಿಲ್ಲ~ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.