ಬೆಂಗಳೂರು: ಕೆಜೆಪಿಯಲ್ಲಿನ ಪ್ರಮುಖ ಪದಾಧಿಕಾರಿಗಳಿಗೆ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥಸಿಂಗ್ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

ಬಿಜೆಪಿಯಲ್ಲಿ ಕೆಜೆಪಿಯನ್ನು ವಿಲೀನಗೊಳಿಸುವ ಸಂದರ್ಭದಲ್ಲಿ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಚರ್ಚಿಸಲಾಗಿತ್ತು. ಆ ಪ್ರಕಾರ ಕೆಜೆಪಿಯಲ್ಲಿದ್ದ ಪ್ರಮುಖರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಬಿಜೆಪಿಗೆ ಸೇರಿಸಿಕೊಂಡು, ಸೂಕ್ತ ಸ್ಥಾನಮಾನ ನೀಡದ ಕಾರಣ ಕೆಜೆಪಿಯ ಹಲವರು ಬೇಸರಗೊಂಡಿದ್ದಾರೆ. ಇದು ಚುನಾವಣೆ ಮೇಲೆ ಪರಿಣಾಮ ಬೀರದಂತೆ ನಿಗಾ ವಹಿಸುವ ಸಲುವಾಗಿ ಆದಷ್ಟು ಬೇಗ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಅಗತ್ಯ ಇದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.