ಕೆಜೆಪಿ-ಬಿಜೆಪಿ ಕಚ್ಚಾಟದ ಲಾಭ ಕಾಂಗ್ರೆಸ್‌ಗೆ: ಶಂಕರ್

7

ಕೆಜೆಪಿ-ಬಿಜೆಪಿ ಕಚ್ಚಾಟದ ಲಾಭ ಕಾಂಗ್ರೆಸ್‌ಗೆ: ಶಂಕರ್

Published:
Updated:

ಪೀಣ್ಯ ದಾಸರಹಳ್ಳಿ: `ಕೆಜೆಪಿ ಹಾಗೂ ಬಿಜೆಪಿ ಕಚ್ಚಾಟದ ಲಾಭ ಕಾಂಗ್ರೆಸ್‌ಗೆ ಆಗಲಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ' ಎಂದು ಮಾಜಿ ಸಚಿವ ಬಿ.ಎಲ್.ಶಂಕರ್ ಅಭಿಪ್ರಾಯಪಟ್ಟರು.ಯಶವಂತಪುರ ವಿಧಾನಸಭಾ ವ್ಯಾಪ್ತಿಯ ದೊಡ್ಡಬಿದರಕಲ್ಲು ವಾರ್ಡ್‌ನ ಸಪ್ತಗಿರಿ ಬಡಾವಣೆ ವಾರ್ಡ್‌ನಲ್ಲಿ ಈಚೆಗೆ ನಡೆದ `ಕಾಂಗ್ರೆಸ್‌ನೊಂದಿಗೆ ಬನ್ನಿ- ಬದಲಾವಣೆ ತನ್ನಿ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಾಂಗ್ರೆಸ್ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಟಿ.ಸೋಮಶೇಖರ್ ಮಾತನಾಡಿ, `ಜನಸಾಮಾನ್ಯರ ಕಷ್ಟಸುಖಗಳನ್ನು ಅರಿತು ಕೆಲಸ ಮಾಡಬೇಕಾದ ಬಿಜೆಪಿ ಸಚಿವರು ಬರಿ ಒಳಜಗಳದಲ್ಲಿ ಭಾಗಿಯಾಗಿದ್ದು ವಿಪರ್ಯಾಸ' ಎಂದರು. ಕೆಪಿಸಿಸಿ ಉಸ್ತುವಾರಿ ಹನುಮಂತರಾವ್, ಕಾಂಗ್ರೆಸ್ ನಾಯಕ ಎಂ.ಸತೀಶ್ ಮತ್ತಿತರರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry