ಶುಕ್ರವಾರ, ನವೆಂಬರ್ 22, 2019
27 °C

ಕೆಜೆಪಿ ಮಾನ್ಯತೆ; ಮುಗಿಯದ ವಿವಾದ

Published:
Updated:

ಬೆಂಗಳೂರು: ಕರ್ನಾಟಕ ಜನತಾ ಪಕ್ಷಕ್ಕೆ (ಕೆಜೆಪಿ) ಕೇಂದ್ರ ಚುನಾವಣಾ ಆಯೋಗ ನೀಡಿರುವ ಮಾನ್ಯತೆ ರದ್ದು ಮಾಡಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೆ ಹೈಕೋರ್ಟ್ ಬುಧವಾರ ಆದೇಶಿಸಿದೆ.ಹೊಟ್ಟೆಪಕ್ಷದ ರಂಗಸ್ವಾಮಿ ಪುತ್ರ ರಾಜೇಂದ್ರ ಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಈ ಆದೇಶ ನೀಡಿದರು. ಕೇಂದ್ರ ಚುನಾವಣಾ ಆಯೋಗ, ಕೆಜೆಪಿ ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನ ಕುಮಾರ್, ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಪಕ್ಷದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿ. ಧನಂಜಯ ಕುಮಾರ್ ಅವರು ಈ ಪ್ರಕರಣದ ಪ್ರತಿವಾದಿಗಳು.`ಪದ್ಮನಾಭ ಅವರು ತಾವು ಹೊಟ್ಟೆಪಕ್ಷದ ರಂಗಸ್ವಾಮಿ ಅವರ ಪುತ್ರ ಎಂದು ಹೇಳಿಕೊಂಡಿದ್ದಾರೆ. ಚುನಾವಣಾ ಆಯೋಗಕ್ಕೆ ನೀಡಿರುವ ದಾಖಲೆಗಳಲ್ಲೂ ಅವರು ಇದೇ ಅಂಶ ಉಲ್ಲೇಖಿಸಿದ್ದಾರೆ.ಆಯೋಗಕ್ಕೆ ತಪ್ಪು ಮಾಹಿತಿ ನೀಡಿ, ಕೆಜೆಪಿಗೆ ಮಾನ್ಯತೆ ಪಡೆದುಕೊಂಡಿದ್ದಾರೆ. ಆದರೆ ರಂಗಸ್ವಾಮಿ ಅವರ ಪುತ್ರ ನಾನು, ಪದ್ಮನಾಭ ಅಲ್ಲ' ಎಂದು ರಾಜೇಂದ್ರ ಕುಮಾರ್ ಅರ್ಜಿಯಲ್ಲಿ ಹೇಳಿದ್ದಾರೆ. ಕೆಜೆಪಿ ಸ್ಥಾಪನೆ ಕುರಿತು ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳಲ್ಲಿ ಪದ್ಮನಾಭ ಅವರು ಸುಳ್ಳು ಮಾಹಿತಿ ನೀಡಿರುವ ಕಾರಣ, ಅದರ ಮಾನ್ಯತೆ ರದ್ದು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆಮುಂದೂಡಲಾಗಿದೆ.

ಪ್ರತಿಕ್ರಿಯಿಸಿ (+)