ಬೆಳಗಾವಿ: ಸಾಂಕ್ರಾಮಿಕ ರೋಗ ನಿಯಂತ್ರಿಸಲು ಗ್ರಾಮಗಳಲ್ಲಿ ನಿಯಮಿತವಾಗಿ ಫಾಗಿಂಗ್ ಮಾಡದಿರುವ ಬಗ್ಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಾಂತಾ ಕಲ್ಲೋಳಿಕರ ಅವರು ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೆ.ಡಿ.ಪಿ. ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, `ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡುತ್ತಿವೆ. ಡೆಂಗೆ, ಚಿಕೂನ್ಗುನ್ಯ ರೋಗಗಳಿಂದ ಜನರು ಬಳಲುತ್ತಿದ್ದಾರೆ. ಇದನ್ನು ನಿಯಂತ್ರಿಸಲು ಹಳ್ಳಿಗಳಲ್ಲಿ ನಿಯಮಿತವಾಗಿ ಫಾಗಿಂಗ್ ಮಾಡಬೇಕು. ಆದರೆ, ಹಲವೆಡೆ ಯಂತ್ರಗಳು ಸುಸ್ಥಿತಿಯಲ್ಲಿ ಇಲ್ಲ. ಈ ಬಗ್ಗೆ ಏಕೆ ಇನ್ನೂ ಕ್ರಮ ಕೈಗೊಂಡಿಲ್ಲ' ಎಂದು ಪ್ರಶ್ನಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ದಿಲೀಪಕುಮಾರ ಮುನ್ನೋಳಿ, `ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಕರಪತ್ರಗಳನ್ನು ಹಳ್ಳಿಗಳಲ್ಲಿ ಹಂಚಲಾಗಿದೆ. ಫಾಗಿಂಗ್ ಮಾಡಲಾಗುತ್ತಿದೆ' ಎಂದು ಸಮಜಾಯಿಷಿ ನೀಡಲು ಮುಂದಾದರು.

`ಎಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಫಾಗಿಂಗ್ ಯಂತ್ರ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ತಿಳಿಸಿ. ಎಷ್ಟು ಗ್ರಾಮಕ್ಕೆ ಭೇಟಿ ನೀಡಿದ್ದೀರಿ' ಎಂದು ತರಾಟೆಗೆ ತೆಗೆದುಕೊಂಡರು.

ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಪರವಿನಾಯ್ಕರ ಮಾತನಾಡಿ, `ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ. ಹಳ್ಳಿಗಳಲ್ಲಿನ ಕೊಳಚೆ ಪ್ರದೇಶಗಳಲ್ಲಿ ಡಿಡಿಟಿ ಪೌಡರ್ ಸಿಂಪಡಿಸುತ್ತಿಲ್ಲ' ಎಂದು ಆಕ್ಷೇಪಿಸಿದರು.

ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೀಪಾ ಚೋಳನ, `ಆರೋಗ್ಯಾಧಿಕಾರಿಗಳು ಹಳ್ಳಿಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಲ್ಲಿಗೆ ಭೇಟಿ ನೀಡಿರುವ ಬಗ್ಗೆ ಸ್ಥಳೀಯರ ಸಹಿ ಪಡೆದು ಅದರ ವರದಿಯನ್ನು ತಪ್ಪದೇ ನಮಗೆ ಕಳುಹಿಸಿಕೊಡಬೇಕು. ಸಭೆಗೆ ಬರುವ ಮುನ್ನ ಇಲಾಖೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ತರಬೇಕು. ಇಲ್ಲಿಗೆ ಬಂದು ಮಾಹಿತಿಗಾಗಿ ಹುಡುಕಾಡಬಾರದು' ಎಂದು ಸೂಚಿಸಿದರು.

`ಜಿಲ್ಲೆಯಲ್ಲಿ ಹಲವು ಅಂಗನವಾಡಿಗಳಿಗೆ ಸ್ವಂತ ಕಟ್ಟಡವೇ ಇಲ್ಲ. ಇದರಲ್ಲಿ ಶೌಚಾಲಯ ನಿರ್ಮಿಸದೇ ಇರುವುದರಿಂದ ಮಕ್ಕಳು ತೊಂದರೆ ಅನುಭವಿಸುವಂತಾಗಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದ ಶಾಂತಾ ಕಲ್ಲೋಳಿಕರ, `ಮಕ್ಕಳ ಹಿತದೃಷ್ಟಿಯಿಂದ ಆದ್ಯತೆ ಮೇರೆಗೆ ಸ್ವಂತ ಕಟ್ಟಡ ನಿರ್ಮಿಸಲು ಆದ್ಯತೆ ನೀಡಬೇಕು' ಎಂದು ಸೂಚಿಸಿದರು.

ಇದಕ್ಕೂ ಮೊದಲು ಈ ಕುರಿತು ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್. ಓಬಳಪ್ಪ, `ಜಿಲ್ಲೆಯಲ್ಲಿ ಒಟ್ಟು 5229 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿವೆ. 2810 ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಇವೆ. ಉಳಿದವುಗಳನ್ನು ಸಮುದಾಯ ಭವನ, ದೇವಸ್ಥಾನ, ಶಾಲಾ ಕಟ್ಟಡ ಹಾಗೂ ಬಾಡಿಗೆ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ' ಎಂದು ಸಭೆಗೆ ಮಾಹಿತಿ ನೀಡಿದರು.

ರಮೇಶ ಪರವಿನಾಯ್ಕರ ಮಾತನಾಡಿ, `ಹಲವು ಗ್ರಾಮಗಳಲ್ಲಿ ಹಳೆಯ ಶೌಚಾಲಯಗಳಿಗೆ ಬಣ್ಣ ಬಳಿದು ಹೊಸದಾಗಿ ಶೌಚಾಲಯ ನಿರ್ಮಿಸಲಾಗಿದೆ ಎಂದು ದಾಖಲೆ ತೋರಿಸಿ ಅನುದಾನವನ್ನು ಪಡೆದುಕೊಳ್ಳಲಾಗುತ್ತಿದೆ. ಅಧಿಕಾರಿಗಳೂ ಇದರಲ್ಲಿ ಶಾಮೀಲಾಗಿದ್ದಾರೆ. ಹೀಗಾಗಿ ಈ ಬಗ್ಗೆ ಸಮಿತಿಯನ್ನು ರಚಿಸಿ ತನಿಖೆ ನಡೆಸಬೇಕು' ಎಂದು ಒತ್ತಾಯಿಸಿದರು. ಈ ಕುರಿತು ಕೂಲಂಕಷವಾಗಿ ಪರಿಶೀಲನೆ ನಡೆಸುವುದಾಗಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಳಿಸಿದರು.

`ಪ್ರತಿ ತಿಂಗಳು ಮೊದಲ ವಾರದಲ್ಲಿ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಮಾಸಿಕ ಪ್ರಗತಿ ವರದಿಯನ್ನು ಜಿಲ್ಲಾ ಪಂಚಾಯಿತಿ ಯೋಜನಾ ಶಾಖೆಗೆ ನೀಡಬೇಕು' ಎಂದು ಶಾಂತಾ ಕಲ್ಲೋಳಿಕರ ಸೂಚಿಸಿದರು.

ಜಿ.ಪಂ.ಗೆ ಸೇರಿದ ಯೋಜನೆ ಮತ್ತು ಯೋಜನೇತರ ಶೀರ್ಷಿಕೆಯಡಿ ಆರ್ಥಿಕ ಮತ್ತು ಭೌತಿಕ ಗುರಿ ಸಾಧನೆ ಮಾಸಿಕ ಪ್ರಗತಿ ವರದಿಯನ್ನು ಎಲ್ಲ ಅಧಿಕಾರಿಗಳು ಸಲ್ಲಿಸಬೇಕು. ಜನಪ್ರತಿನಿಧಿಗಳು ಮಾಹಿತಿ ಕೇಳಿದರೆ, ಅಂತಹವರಿಗೆ ಸೂಕ್ತ ದಾಖಲಾತಿಯೊಂದಿಗೆ ಮಾಹಿತಿ ಪೂರೈಸಬೇಕು. ಕೆ.ಡಿ.ಪಿ. ಸಭೆಗೆ ಬರುವಾಗ ದಾಖಲಾತಿ ಪುರಾವೆ ಹಾಜರುಪಡಿಸಬೇಕು ಎಂದು ದೀಪಾ ಅಧಿಕಾರಿಗಳಿಗೆ ಆದೇಶಿಸಿದರು.

ಜಿಲ್ಲೆಯ 10 ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ನೋಡಲ್ ಅಧಿಕಾರಿಗಳು ತಮಗೆ ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗೆ ಭೇಟಿ ನೀಡಿದಾಗ ಸರ್ಕಾರದ ಯೋಜನೆಗಳ ಕ್ರಿಯಾಯೋಜನೆ ಅನುಷ್ಠಾನ ಪರಿಶೀಲನೆ ಮಾಡಬೇಕು ಎಂದು ತಿಳಿಸಿದರು.

ಅಕ್ಷರ ದಾಸೋಹ ಯೋಜನೆಯಡಿ 2012-13ನೇ ಸಾಲಿನಲ್ಲಿ ಒಟ್ಟು 70 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಅದರಲ್ಲಿ 69 ಕೋಟಿ ಅನುದಾನ ಖರ್ಚಾಗಿದೆ. ಪ್ರಸಕ್ತ ವರ್ಷ 76.85 ಕೋಟಿ ರೂಪಾಯಿ ಕ್ರಿಯಾಯೋಜನೆಗೆ ಅನುಮೋದನೆ ದೊರತಿದೆ ಎಂದು ಅಕ್ಷರ ದಾಸೋಹ ಅಧಿಕಾರಿಗಳು ಸಭೆಗೆ ತಿಳಿಸಿದರು.

ಶಾಲೆಗಳಲ್ಲಿ ಅಡುಗೆ ಕೋಣೆ ನಿರ್ಮಿಸಲು ಪ್ರಸಕ್ತ ಸಾಲಿಗೆ ್ಙ 17.11 ಕೋಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಶಾಲೆಗಳಲ್ಲಿ ದಾಸೋಹ ಪಡೆಯುವ 50 ಮಕ್ಕಳಳಿಗೆ ಒಬ್ಬರಂತೆ ಸ್ವಚ್ಚತೆ ಕಾರ್ಯಕ್ಕಾಗಿ ಸಿಬ್ಬಂದಿ ನೇಮಕಾತಿಗಾಗಿ ಅನುಮತಿ ನೀಡಿದೆ ಎಂದರು.

ಸಭೆಯಲ್ಲಿ ಆಹಾರ ಭದ್ರತೆ, ಪಡಿತರ ಚೀಟಿ, ಆರೋಗ್ಯ, ಸಾಮಾಜಿಕ ಅರಣ್ಯ, ಸಸಿ ನೀಡುವ ಕಾರ್ಯಕ್ರಮ ಸಮಾಜ ಕಲ್ಯಾಣ ಇಲಾಖೆ, ಕೃಷಿ, ಜಲ ನಿರ್ಮಲ ಯೋಜನೆ, ಜಲಾಯನ, ಪಶು ಸಂಗೋಪನೆ, ತೋಟಗಾರಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು.

ಜಿ.ಪಂ. ಉಪಾಧ್ಯಕ್ಷೆ ಉಷಾ ಶಿಂತ್ರಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮಣ ದೊಡ್ಡಮನಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ನಂದಾ ಸನ್ನಾಯಿಕ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.