ಶುಕ್ರವಾರ, ಜೂನ್ 18, 2021
24 °C

ಕೆಟ್ಟ ಬೆಳವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಮಾಧ್ಯಮ ಪ್ರತಿನಿಧಿಗಳ ಮೇಲೆ ವಕೀಲರ ಹಲ್ಲೆ ಒಂದು ಕೆಟ್ಟ ಬೆಳವಣಿಗೆ. ಇಂತಹ ಅನಾಹುತಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಸೋತಿದೆ~ ಎಂದು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಖಾತೆಯ ಸಚಿವ ಎಂ.ವೀರಪ್ಪ ಮೊಯಿಲಿ ವಿಷಾದಿಸಿದರು.



ನಗರದಲ್ಲಿ ಶನಿವಾರ ನಡೆದ  `ಬಿಂಬ ಭಾರತ~ ಪುಸ್ತಕದ ಬಿಡುಗಡೆ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಕೋರ್ಟ್ ಆವರಣದಲ್ಲಿಯೇ ವಕೀಲರು ಈ ರೀತಿ ನಡೆದುಕೊಂಡಿರುವ ರೀತಿ ಸರಿಯಲ್ಲ. ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಲು ಅವಕಾಶವಿತ್ತು~.



`ಈ ಪ್ರವೃತ್ತಿಗೆ ನ್ಯಾಯಾಂಗ ತನಿಖೆಯೇ ಪರಿಹಾರವಲ್ಲ. ಇವು ಮರುಕಳಿಸದಂತೆ ನೋಡಿಕೊಳ್ಳಬೇಕು. ವಕೀಲರು ಹಾಗೂ ಮಾಧ್ಯಮ ಸಂಘಗಳು ಪರಸ್ಪರ ಮಾತುಕತೆ ಮೂಲಕ ಭಿನ್ನಾಭಿಪ್ರಾಯಗಳನ್ನು ನಿವಾರಿಸಿಕೊಳ್ಳಬೇಕು~ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.