ಶುಕ್ರವಾರ, ನವೆಂಬರ್ 15, 2019
20 °C

ಕೆನರಾ ಬ್ಯಾಂಕ್ ದರೋಡೆಗೆ ಯತ್ನ

Published:
Updated:

ಮಡಿಕೇರಿ: ಇಲ್ಲಿಗೆ ಸಮೀಪದ ಮಕ್ಕಂದೂರು ಕೆನರಾ ಬ್ಯಾಂಕ್‌ಗೆ ಕನ್ನ ಹಾಕಿದ್ದ ಖದೀಮರು ದರೋಡೆ ನಡೆಸಲು ಮಾಡಿದ ಪ್ರಯತ್ನ ವಿಫಲವಾದ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ. ಪ್ರಕರಣವು ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.ರಾತ್ರಿ ವೇಳೆ ಬ್ಯಾಂಕಿನ ಹಿಂಬದಿ ಗೋಡೆಗೆ ಕನ್ನ ಕೊರೆದ ಖದೀಮರು ಬ್ಯಾಂಕ್ ಒಳಗೆ ನುಗ್ಗಿದ್ದಾರೆ. ಭದ್ರತಾ ಕೊಠಡಿಯ ಬಾಗಿಲು ತೆರೆಯಲು ಸಾಕಷ್ಟು ಕಸರತ್ತು ನಡೆಸಿದ್ದರು. ಆದರೆ, ಭದ್ರತಾ ಕೊಠಡಿಯನ್ನು ಭೇದಿಸಲು ಅವರಿಂದ ಸಾಧ್ಯವಾಗಿಲ್ಲ. ಇದರಿಂದ ನಿರಾಶರಾದ ಖದೀಮರು ಅಲ್ಲಿಂದ ಪರಾರಿಯಾದರು.ಬೆಳಿಗ್ಗೆ ಪೊಲೀಸರು ಶ್ವಾನದಳ ಹಾಗೂ ಬೆರಳಚ್ಚು ತಜ್ಞ ತಂಡರ ಜೊತೆ ಭೇಟಿ ನೀಡಿ, ಘಟನಾ ಸ್ಥಳದ ಪರಿಶೀಲನೆ ನಡೆಸಿದರು. ಪ್ರಕರಣವನ್ನು ದಾಖಲಿಸಿಕೊಂಡಿರುವ ಮಡಿಕೇರಿ ಗ್ರಾಮಾಂತರ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಪ್ರತಿಕ್ರಿಯಿಸಿ (+)