ಬೆಂಗಳೂರು: ‘ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆದಿರುವ ಅಕ್ರಮಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಡಿ. 21 ರಂದು ಮುಖ್ಯಮಂತ್ರಿಗಳ ನಿವಾಸದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಲೋಕಸತ್ತಾ ಪಕ್ಷದ ರಾಜ್ಯಘಟಕದ ಕಾರ್ಯಕಾರಿ ಸಮಿತಿಯ ಸದಸ್ಯ ರವಿ ಕೃಷ್ಣಾರೆಡ್ಡಿ ತಿಳಿದರು.

ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಗಾಗಿ ಕೆಪಿಎಸ್ಸಿ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಿಐಡಿ ಪೊಲೀಸರು ನಡೆಸಿದ ತನಿಖೆಯ ವರದಿಯನ್ನು ಸೆ. 10ರಂದು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಆದರೆ, ಸರ್ಕಾರ ಈವರೆಗೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ದೂರಿದರು.

ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳು, ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಮೇಲೆ ದೂರು ದಾಖಲಿಸಲು ಸಿಐಡಿ ಕೇಳಿದ ಅನುಮತಿಗೆ ಸರ್ಕಾರ ಅನುಮತಿ ನೀಡಿಲ್ಲ. ಇದರಿಂದ ಸರ್ಕಾರ ಭ್ರಷ್ಟರನ್ನು ರಕ್ಷಿಸುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದರು.

ಸರ್ಕಾರ 2011ರಲ್ಲಿ ನಡೆಸಿದ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸಬೇಕು, ಯುಪಿಎಸ್ಸಿ ಮಾದರಿಯ ನೇಮಕಾತಿ ಪ್ರಕ್ರಿಯೆಯನ್ನು ಅಳವಡಿಸಬೇಕು, ಹೊಸ ನೇಮಕಾತಿಗೆ ನೋಟಿಫಿಕೇಷನ್ ಹೊರಡಿಸಬೇಕು ಮತ್ತು ಈ ಹಿಂದೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಮತ್ತೆ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.