ಸೋಮವಾರ, ಏಪ್ರಿಲ್ 19, 2021
32 °C

ಕೆಪಿಎಸ್‌ಸಿ ಫಲಿತಾಂಶ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಲೋಕಸೇವಾ ಆಯೋಗ ನಡೆಸಿದ 2011ನೇ ಸಾಲಿನ ಇಲಾಖಾ ಪರೀಕ್ಷೆಗಳ ಫಲಿತಾಂಶವನ್ನು ಆಯೋಗದ ಕೇಂದ್ರ ಕಚೇರಿ ಮತ್ತು ಪ್ರಾದೇಶಿಕ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಫಲಿತಾಂಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಡಯಟ್ ಕಚೇರಿಗಳು, ಉಪನಿರ್ದೇಶಕರ ಕಚೇರಿಗಳಲ್ಲೂ ಪ್ರಕಟಿಸಲಾಗಿದೆ.ಫಲಿತಾಂಶ ಮತ್ತು ಅಂಕಪಟ್ಟಿ ವೆಬ್‌ಸೈಟ್‌ನಲ್ಲಿ (http://kpsc.­kar.nic.in)  ಲಭ್ಯವಿದೆ ಎಂದು ಆಯೋಗದ ಕಾರ್ಯದರ್ಶಿ ಡಾ.ಡಿ.ಎಸ್. ವಿಶ್ವನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅನುತ್ತೀರ್ಣರಾದವರು ಅಂಕಗಳ ಮರು ಎಣಿಕೆಗೆ 30 ದಿನಗಳೊಳಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.