ಶುಕ್ರವಾರ, ಏಪ್ರಿಲ್ 16, 2021
21 °C

ಕೆಪಿಸಿಸಿ ಎಸ್‌ಸಿ ಘಟಕದ ತೀರ್ಮಾನ:ಎಲ್ಲ ಕ್ಷೇತ್ರಗಳಲ್ಲೂ ಎಸ್‌ಸಿ ಉಪಸಮಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣಾ ಸಿದ್ಧತೆಯ ಭಾಗವಾಗಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಪರಿಶಿಷ್ಟ ಜಾತಿ ಘಟಕದ ಉಪ ಸಮಿತಿಗಳನ್ನು ನೇಮಕ ಮಾಡಲಾಗುವುದು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಎನ್.ಮಂಜುನಾಥ್ ತಿಳಿಸಿದರು.ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಪರಿಶಿಷ್ಟ ಜಾತಿಯ ಮತದಾರರನ್ನು ಕಾಂಗ್ರೆಸ್‌ನತ್ತ ಸೆಳೆಯಲು ಈ ಸಮಿತಿಗಳನ್ನು ನೇಮಕ ಮಾಡಲಾಗುವುದು. ಪಕ್ಷದಲ್ಲಿ ಸಕ್ರಿಯವಾಗಿರುವ ಪರಿಶಿಷ್ಟ ಜಾತಿಯ ಹಿರಿಯ ಮುಖಂಡರ ನೇತೃತ್ವದಲ್ಲಿ ಈ ಸಮಿತಿಗಳನ್ನು ನೇಮಿಸಲಾಗುವುದು. ಇವನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಲಾಗುವುದು~ ಎಂದರು.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿ ನಡೆದಿಲ್ಲ. ಏಳು ಸಾವಿರ ಬ್ಯಾಕ್‌ಲಾಗ್ ಹುದ್ದೆಗಳು ಖಾಲಿ ಉಳಿದಿವೆ. ಎಸ್.ಎಂ.ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ 18 ಸಾವಿರ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು.ಈ ಸರ್ಕಾರದ ಅವಧಿಯಲ್ಲಿ ದಲಿತರ ಮೇಲೆ ದೌರ್ಜನ್ಯವೂ ಹೆಚ್ಚುತ್ತಿದೆ. ಇವನ್ನೆಲ್ಲ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.