ಬುಧವಾರ, ನವೆಂಬರ್ 20, 2019
27 °C

ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಪ್ರಥಮ ಸಭೆ ಇಂದು

Published:
Updated:

ಬೆಂಗಳೂರು: ವಿಧಾನ ಪರಿಷತ್‌ನ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ಅಧ್ಯಕ್ಷತೆಯ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಮೊದಲ ಸಭೆ ಬುಧವಾರ ನಡೆಯಲಿದೆ.ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಮಿತಿಯ ಸಹ ಅಧ್ಯಕ್ಷರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಸಮಿತಿಯಲ್ಲಿದ್ದಾರೆ. ಚುನಾವಣಾ ಪ್ರಚಾರ ಕಾರ್ಯತಂತ್ರ, ಪ್ರಚಾರದ ಸ್ವರೂಪ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮತ್ತಿಕಟ್ಟಿ ತಿಳಿಸಿದ್ದಾರೆ.ಅಸಮಾಧಾನ: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಬಹುದು ಎಂಬ ಆತಂಕದಲ್ಲಿರುವ ಮಾಜಿ ಸಚಿವೆ ರಾಣಿ ಸತೀಶ್ ಅವರು ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸಮುದಾಯಕ್ಕೆ ಅನ್ಯಾಯ

`ರಾಜಾಜಿನಗರದಲ್ಲಿ ಲಿಂಗಾಯತ ಸಮುದಾಯದವರಿಗೆ ಟಿಕೆಟ್ ನೀಡಲಾಗುವುದು ಎಂದು ಪಕ್ಷದ ವರಿಷ್ಠರು ಭರವಸೆ ನೀಡಿದ್ದರು. ಆದರೆ, ಮಾಧ್ಯಮಗಳಲ್ಲಿ ಮಂಜುಳಾ ನಾಯ್ಡು ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ವರದಿಯಾಗಿದೆ. ನನಗೆ ಟಿಕೆಟ್ ದೊರೆಯದಿದ್ದರೆ ಲಿಂಗಾಯತ ಸಮುದಾಯದವರು ಅನ್ಯಾಯವಾಗಲಿದೆ'.

-ರಾಣಿ ಸತೀಶ್

ಪ್ರತಿಕ್ರಿಯಿಸಿ (+)