ಕೆ.ಪಿ.ಸುರೇಂದ್ರನಾಥ್ ನಿಧನ

7

ಕೆ.ಪಿ.ಸುರೇಂದ್ರನಾಥ್ ನಿಧನ

Published:
Updated:

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ಕೆ.ಪಿ.ಸುರೇಂದ್ರನಾಥ್ (80) ಅವರು ನಗರದಲ್ಲಿ ಶನಿವಾರ ರಾತ್ರಿ ನಿಧನರಾದರು. ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಹೆಬ್ಬಾಳದ ವಿದ್ಯುತ್ ಚಿತಾಗಾರದಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಸಂಸ್ಕಾರ ನಡೆಯಿತು.ಸುರೇಂದ್ರನಾಥ್ ಅವರು ಮೈಸೂರು ಪೇಪರ್ ಮಿಲ್ಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ, ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಕಾಮೆಡ್-ಕೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

 ರಾಜ್ಯದ ಎರಡನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಹಾಗೂ ಕರ್ನಾಟಕ ವಿದ್ಯುತ್ ಕಾರ್ಖಾನೆ ಮತ್ತು ಕಿಮ್ಕೊ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.ಸದ್ಯ ಅವರು ಎಂಇಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿದ್ದರು. ಅಲ್ಲದೇ ಸೆಂಚುರಿ ಕ್ಲಬ್‌ನ ಉಪಾಧ್ಯಕ್ಷರಾಗಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry