ಚಿಕ್ಕಮಗಳೂರು: ಪಶ್ಚಿಮ ಘಟ್ಟ ಸಾಲಿನ ಚಂದ್ರದ್ರೋಣ ಪರ್ವತ ಶ್ರೇಣಿಯ ನಿಸರ್ಗದ ಮಡಿಲಿನಲ್ಲಿರುವ ಕೆಮ್ಮಣ್ಣುಗುಂಡಿಯಲ್ಲಿ ಕಬ್ಬಿಣ ಅದಿರು ಗಣಿಗಾರಿಕೆಯನ್ನು ಶಾಶ್ವತವಾಗಿ ನಡೆಸದಂತೆ ಜಿಲ್ಲಾ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ಸೋಮವಾರ ಮಹತ್ವದ ತೀರ್ಪು ನೀಡಿದೆ.

ಭದ್ರಾ ಹುಲಿ ಸಂರಕ್ಷಿತ ಅಭಯಾರಣ್ಯಕ್ಕೆ ಹೊಂದಿಕೊಂಡಂತಿರುವ ಸೂಕ್ಷ್ಮ ಪರಿಸರ ಪ್ರದೇಶ ಎನಿಸಿರುವ ಹಿನ್ನೆಲೆಯಲ್ಲಿ, ಈ ಪ್ರದೇಶದಲ್ಲಿ ಯಾವುದೇ ಗಣಿಗಾರಿಕೆ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸದಂತೆ ಶಾಶ್ವತ ನಿರ್ಬಂಧ ವಿಧಿಸಿ ಜಿಲ್ಲಾ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್ ನಾಯಕ್ ಆದೇಶ ನೀಡಿದರು.

ಕೆಮ್ಮಣ್ಣುಗುಂಡಿಯಲ್ಲಿ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಅದಿರು ಕಂಪನಿ 1923ರಿಂದ 1983ರವರೆಗೆ ಆರು ದಶಕಗಳ ಕಾಲ ನಿರಂತರವಾಗಿ ಕಬ್ಬಿಣ ಅದಿರು ಗಣಿಗಾರಿಕೆ ನಡೆಸಿತ್ತು. ಗಣಿಗಾರಿಕೆ ನಿಯಮಾವಳಿಯಂತೆ ಮೂರು ಅವಧಿಯ ಪರವಾನಗಿ ಮುಗಿದ ಹಿನ್ನೆಲೆಯಲ್ಲಿ 1983ರಿಂದ ಈ ಪ್ರದೇಶದಲ್ಲಿ ಗಣಿಗಾರಿಕೆ ಸಂಪೂರ್ಣ ಸ್ಥಗಿತಗೊಂಡಿತ್ತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಬ್ಬಿಣ ಅದಿರಿಗೆ ಬೇಡಿಕೆ ಸೃಷ್ಟಿಯಾದಾಗ 1995ರಲ್ಲಿ ಮತ್ತೆ ಈ ಪ್ರದೇಶದಲ್ಲಿ ವಿಎಸ್ಐಎಲ್ ಸಂಸ್ಥೆ ಹೆಸರಿನಲ್ಲಿ ಮೂರು ಖಾಸಗಿ ಕಂಪೆನಿಗಳು ಉಪ ಗುತ್ತಿಗೆ ಪಡೆದು ಪುನಃ ಗಣಿಗಾರಿಕೆ ಆರಂಭಿಸಿದ್ದವು. ಇದನ್ನು ಪ್ರಶ್ನಿಸಿ ಸ್ಥಳೀಯ ಪರಿಸರ ಸಂಘಟನೆ ವೈಲ್ಡ್ ಕ್ಯಾಟ್- ಸಿ ಮತ್ತು ಐವರು ಪರಿಸರವಾದಿಗಳು 2008ರಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿ ಮತ್ತು ಗಣಿಗಾರಿಕೆ ಕಾನೂನು ಉಲ್ಲಂಘಿಸಿ ಗಣಿಗಾರಿಕೆ ಮಾಡುತ್ತಿರುವುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಅದಿರು ಕಂಪೆನಿಯಿಂದ ಉಪ ಗುತ್ತಿಗೆ ಪಡೆದ ಕಂಪೆನಿಗಳು ಈ ಪ್ರದೇಶದಲ್ಲಿ ಗಣಿಗಾರಿಕೆ ಮಾಡುತ್ತಿಲ್ಲ. ಬದಲಾಗಿ `ವೇಸ್ಟ್ ಮಟೀರಿಯಲ್~ ಸಾಗಿಸಲಾಗುತ್ತಿದೆ. ಇದಕ್ಕೆ ಪ್ರಧಾನ ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿಗಳ ಅನುಮತಿ ಪಡೆದುಕೊಳ್ಳಲಾಗಿದೆ ಎಂದು ವಾದಿಸಿದ್ದರು.

ಈ ವಾದ ಮಾನ್ಯ ಮಾಡದ ನ್ಯಾಯಾಲಯ, ಪರಿಸರ ಸಂಘಟನೆ ಮತ್ತು ಪರಿಸರವಾದಿಗಳ ವಾದವನ್ನು ಮಾನ್ಯ ಮಾಡಿದೆ. ವೈಲ್ಡ್ ಕ್ಯಾಟ್ -ಸಿ ಸಂಘಟನೆ ಪರವಾಗಿ ವಕೀಲರಾದ ಎಸ್.ದಿನಕರ ರಾವ್ ಮತ್ತು ಟಿ.ಎಸ್.ಉತ್ತಯ್ಯ ವಾದಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.